ತನಿಷಾ ಕುಪ್ಪಂಡ ಮತ್ತು ಕಿಶನ್ ನಟನೆಯ ಪೆನ್‌ಡ್ರೈವ್ ಸಿನಿಮಾ ತೆರೆಗೆ
ಎನ್. ಹನುಮಂತರಾಜು ಮತ್ತು ಲಯನ್ ಎಸ್. ವೆಂಕಟೇಶ್ ನಿರ್ಮಿಸಿರುವ ಈ ಚಿತ್ರಕ್ಕೆ ಸೆಬಾಸ್ಟಿನ್ ಡೇವಿಡ್ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ.;
ಪೆನ್ ಡ್ರೈವ್ ಸಿನಿಮಾ ಜೂನ್ ೪ ರಂದು ಬಿಡುಗಡೆಯಾಗಲಿದೆ.
ಬಹು ನಿರೀಕ್ಷಿತ `ಪೆನ್ ಡ್ರೈವ್' ಸಿನಿಮಾ ಜುಲೈ 4 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಈ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಎನ್. ಹನುಮಂತರಾಜು ಮತ್ತು ಲಯನ್ ಎಸ್. ವೆಂಕಟೇಶ್ ನಿರ್ಮಿಸಿರುವ ಈ ಚಿತ್ರಕ್ಕೆ ಸೆಬಾಸ್ಟಿನ್ ಡೇವಿಡ್ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಚಿತ್ರದ ಹಾಡುಗಳು, ಟೀಸರ್ ಮತ್ತು ಟ್ರೈಲರ್ ಈಗಾಗಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು, ಶೀರ್ಷಿಕೆಯು ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ.
ಚಿತ್ರರಂಗದಲ್ಲಿ ಮೂವತ್ತು ವರ್ಷಗಳ ಅನುಭವ ಹೊಂದಿರುವ ಸೆಬಾಸ್ಟಿನ್ ಡೇವಿಡ್, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. `ಪೆನ್ ಡ್ರೈವ್' ಚಿತ್ರದಲ್ಲಿ ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದು, ತನಿಷಾ ಕುಪ್ಪಂಡ ಮತ್ತು ಕಿಶನ್ ಮಹತ್ವದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ತಾರಾಬಳಗದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್. ಹನುಮಂತರಾಜು ಮುಂತಾದವರು ಇದ್ದಾರೆ.
ಡಾ. ವಿ. ನಾಗೇಂದ್ರಪ್ರಸಾದ್ ಸಂಗೀತ ನಿರ್ದೇಶನ, ಪಿ.ವಿ.ಆರ್. ಸ್ವಾಮಿ ಅವರ ಛಾಯಾಗ್ರಹಣ, ಮತ್ತು ನಾಗೇಶ್ ಅವರ ಸಂಕಲನ ಹಾಗೂ ಸಂಭಾಷಣೆ ಈ ಚಿತ್ರಕ್ಕಿದೆ. `ಪೆನ್ ಡ್ರೈವ್' ಚಿತ್ರವು ಪ್ರೇಕ್ಷಕರ ನಿರೀಕ್ಷೆಗಳನ್ನು ಪೂರೈಸುವ ಭರವಸೆ ಮೂಡಿಸಿದೆ.