ಮೇ 9 ಕ್ಕೆ ತೆರೆಗೆ ಬರಲಿದೆ ಚಂದನ್ ಶೆಟ್ಟಿ ಅಭಿನಯದ ʻಸೂತ್ರಧಾರಿʼ ಚಿತ್ರ

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ.;

Update: 2025-04-16 06:03 GMT

ಚಂದನ್‌ ಶೆಟ್ಟಿ 

ಚಂದನ್‌ ಶೆಟ್ಟಿ ಅಭಿನಯದ "ಸೂತ್ರಧಾರಿ" ಸಿನಿಮಾದ ಮೇ 9 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಸಿನಿಮಾವನ್ನು ಈಗಲ್ ಮೀಡಿಯಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಾಣ ಮಾಡಲಾಗಿದೆ. 

ಚಂದನ್ ಶೆಟ್ಟಿ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದೆ. ʻಡ್ಯಾಶ್ʼ ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಟೀಸರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡಿರುವ ʻಸೂತ್ರಧಾರಿʼ ಚಿತ್ರದ ಬಿಡುಗಡೆಗೆ ಚಂದನ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. 

ಚಂದನ್ ಶೆಟ್ಟಿ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ‌. ಸಂಜನಾ ಆನಂದ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ, ಪ್ರಶಾಂತ್ ನಟನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.

Tags:    

Similar News