TOXIC Movie Release | ಯಶ್​ ಅಭಿನಯದ ಟಾಕ್ಸಿಕ್ ಸಿನಿಮಾದ ರಿಲೀಸ್ ಡೇಟ್​ ಪ್ರಕಟ

ಗೀತು ಮೋಹನ್‌ದಾಸ್‌ ನಿರ್ದೇಶನದ ಈ ಚಿತ್ರ ಅದ್ಭುತ ಸಿನಿಮೀಯ ಪ್ರಯತ್ನಕ್ಕೆ ಕೈ ಹಾಕಿದ್ದು, ಜಾಗತಿಕ ಪ್ರೇಕ್ಷಕರನ್ನು ಗುರಿಯಾಗಿಸಿ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ನಿರ್ಮಾಣವಾಗುತ್ತಿದೆ;

Update: 2025-03-22 12:28 GMT

'ರಾಕಿಂಗ್ ಸ್ಟಾರ್' ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾ ತಂಡದಿಂದ ಹೊಸ ಸುದ್ದಿಯನ್ನು ಪ್ರಕಟಿಸಿದೆ. ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಸಿನಿಮಾ 2026ರ ಮಾರ್ಚ್​ 19ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ ಎಂಬುದಾಗಿ ಹೇಳಿದೆ.

ನಟ ಯಶ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್​ ಮೂಲಕ ಈ ಸುದ್ದಿಯನ್ನು ಪ್ರಕಟಿಸಿದ್ದಾರೆ. ಟಾಕ್ಸಿಸ್ ಸಿನಿಮಾದ ಪೋಸ್ಟರ್ ಒಂದನ್ನು ಶೇರ್ ಮಾಡಿರುವ ಅವರು 19-03-2026 ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಇದು ಸಿನಿಮಾ ಬಿಡುಗಡೆಯ ದಿನಾಂಕ ಎಂದು ಹೇಳಲಾಗಿದೆ.

ಎರಡು ಭಾಷೆಯಲ್ಲಿ ನಿರ್ಮಾಣ

'ರಾಕಿಂಗ್‌ ಸ್ಟಾರ್‌' ಯಶ್‌ ಅಭಿನಯದ ‘ಟಾಕ್ಸಿಕ್‌: ಅ ಫೇರಿ ಟೇಲ್‌ ಫಾರ್‌ ಗ್ರೋನ್‌ ಅಫ್ಸ್‌’ ಸಿನಿಮಾ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಚಿತ್ರೀಕರಣವಾಗುತ್ತಿದೆ. ಈ ಮೂಲಕ ಇದು ಭಾರತೀಯ ಚಿತ್ರರಂಗದಲ್ಲಿ ಎರಡು ಭಾಷೆಗಳಲ್ಲಿ ಒಟ್ಟಿಗೆ ಚಿತ್ರೀಕರಣವಾಗುತ್ತಿರುವ ಮೊದಲ ಸಿನಿಮಾ ಎಂಬ ಖ್ಯಾತಿಯನ್ನೂ ಪಡೆದುಕೊಂಡಿದೆ.

ಗೀತು ಮೋಹನ್‌ದಾಸ್‌ ನಿರ್ದೇಶನದ ಈ ಚಿತ್ರ ಅದ್ಭುತ ಸಿನಿಮೀಯ ಪ್ರಯತ್ನಕ್ಕೆ ಕೈ ಹಾಕಿದ್ದು, ಜಾಗತಿಕ ಪ್ರೇಕ್ಷಕರನ್ನು ಗುರಿಯಾಗಿಸಿ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಜತೆಗೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಭಾರತದ ಮತ್ತು ಅಂತಾರಾಷ್ಟ್ರೀಯ ಭಾಷೆಗಳಿಗೆ ಡಬ್‌ ಆಗಲಿದೆ.

ಈ ಹಿಂದೆ ನಿರ್ದೇಶಕಿ ಗೀತು ಮೋಹನ್‌ದಾಸ್‌ ಮಾತನಾಡಿ, "ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಕಥೆಯ ಸೂಕ್ಷ್ಮ ವ್ಯತ್ಯಾಸಗಳನ್ನು ಸೆರೆ ಹಿಡಿಯಲು ಪ್ರಯತ್ನಿಸಿದ್ದೇವೆ. ‘ಟಾಕ್ಸಿಕ್‌’ ಚಿತ್ರ ವಿಭಿನ್ನ ಭಾಷೆಗಳು ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವೀಕ್ಷಕರಿಗೆ ಉತ್ತಮ ಅನುಭವ ನೀಡಲಿದೆ ಎಂದು ಹೇಳಿಕೊಂಡಿದ್ದರು.

ದುಬಾರಿ ಬಜೆಟ್‌ ಸಿನಿಮಾ

'ಟಾಕ್ಸಿಕ್‌' ಚಿತ್ರಕ್ಕೆ ಹಾಲಿವುಡ್‌ನ ‘ಜಾನ್‌ ವಿಕ್‌’ ಮತ್ತು ‘ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌’ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿರುವ ಅಂತಾರಾಷ್ಟ್ರೀಯ ಖ್ಯಾತಿಯ ಜೆ ಜೆ ಪೆರ್ರಿ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

ನಟರ ಸಾಲಿನಲ್ಲಿ, ಯಶ್ ಬಿಟ್ಟರೆ, ಬೇರೆ ಯಾರ ಹೆಸರನ್ನೂ ಈವರೆಗೂ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಈ ಸಿನಿಮಾದ ಭಾಗವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Tags:    

Similar News