ಗೀತಪ್ರಿಯ ಅಭಿನಯದ 'ಅಪರಿಚಿತೆ' ಚಿತ್ರದ ಟ್ರೇಲರ್ ಬಿಡುಗಡೆ: ನೈಜ ಕಥೆಗೆ ಮಾಜಿ ಸಿಎಂ ಸಾಥ್
ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರು ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ಹಿರಿಯ ನಟಿ ತಾರಾ ಅನುರಾಧಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
'ಅಪರಿಚಿತೆ
ನಟಿ ಗೀತಪ್ರಿಯ ಸುರೇಶ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಅಪರಿಚಿತೆ' ಕನ್ನಡ ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದೆ.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ಹಿರಿಯ ನಟಿ ತಾರಾ ಅನುರಾಧಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
'ತಾಯವ್ವ' ಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಗೀತಪ್ರಿಯ ಅವರು 'ಅಪರಿಚಿತೆ'ಯಲ್ಲಿ ಶಿಕ್ಷಕಿಯ ಪಾತ್ರ ನಿರ್ವಹಿಸಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಸದಾನಂದ ಗೌಡ ಅವರು, ಗೀತಪ್ರಿಯ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಉದ್ದೇಶದಿಂದ ಈ ಸಿನಿಮಾ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಟಿ ತಾರಾ ಅವರು ಚಿತ್ರದ ಹಾಡು ಬಿಡುಗಡೆ ಮಾಡಿದರು.
ನಿರ್ದೇಶಕ ವಿಶ್ವನಾಥ್ ಮಾತನಾಡಿ, ಇದು ನೈಜ ಕಥೆ ಆಧಾರಿತ ಸಿನಿಮಾ. ರಾಮನಗರದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಕ್ರಿಸ್‌ಮಸ್ ವೇಳೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು. ಚಿತ್ರಕ್ಕೆ ವಿಶ್ವನಾಥ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿಂಧು ಲೋಕನಾಥ್, ಆರ್.ಜೆ.ನಿಖಿತಾ, ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಪುತ್ರ ರೋಹಿತ್ ಪ್ರಮುಖ ಪಾತ್ರದಲ್ಲಿದ್ದಾರೆ.