ಉಪೇಂದ್ರ ನಟನೆಯ 'UI' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಉಪೇಂದ್ರ 'ಯುಐ' ತೆರೆಗೆ ಬರಲು ಸಿದ್ದವಾಗಿದೆ. ಈ ಸಿನಿಮಾ ಡಿಸೆಂಬರ್ 20 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

Update: 2024-10-14 13:02 GMT
ನಟ ಉಪೇಂದ್ರ ನಟನೆಯ UI ಸಿನಿಮಾದ ಪೋಸ್ಟರ್‌

ಬಹು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಚಿತ್ರ 'ಯುಐ' ತೆರೆಗೆ ಬರಲು ಸಿದ್ದವಾಗಿದೆ. ಈ ಸಿನಿಮಾ  ಡಿಸೆಂಬರ್ 20 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಈ ಬಗ್ಗೆ ಪೊಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ, "ಇಷ್ಟು ದಿನ ಸಿನಿಮಾ ನೋಡಿ ನೀವು ಹಿಟ್, ಫ್ಲಾಪ್ ಅಂತ ಹೇಳ್ತಿದ್ರೀ. ಈ ಸಿನಿಮಾ ನಿಮ್ಮನ್ ನೋಡಿ ಮತ್ತು" ಎಂಬ ವಾಕ್ಯದೊಂದಿಗೆ ಗಮನ ಸೆಳೆಯುತ್ತಿದ್ದು, ಚಿತ್ರದ ಬಗ್ಗೆ ಅಭಿಮಾನಿಗಳಿಗಿರುವ ಕುತೂಹಲ ಹೆಚ್ಚಿಸಿದೆ.

ಉಪೇಂದ್ರ ನಿರ್ದೇಶಿಸಿರುವ 'ಯುಐ' ಈಗಾಗಲೇ ಬಿಡುಗಡೆ ಆಗಬೇಕಿತ್ತು. ಅಕ್ಟೋಬರ್ ಕೊನೆಯ ವಾರದಲ್ಲಿ ದೀಪಾವಳಿಗೆ ಸಿನಿಮಾ ಬಿಡುಗಡೆ ಆಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ, ಆ ವೇಳೆ  ಶ್ರೀಮುರಳಿ ನಟನೆಯ 'ಬಘೀರ' ಸಿನಿಮಾ ರಿಲೀಸ್ ಆಗುತ್ತಿದೆ. ಆಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿ ಸುಮ್ಮನಾಗಿದ್ದು ಯಾಕೆ? ಅನ್ನೋ ಮಾತು ಕೇಳಿಬಂದಿತ್ತು. ಈಗ ರಿಲೀಸ್ ಡೇಟ್ ಅನೌನ್ಸ್ ಆಗುತ್ತಿದ್ದಂತೆ ಕಿಚ್ಚ ಸುದೀಪ್ ಮ್ಯಾಕ್ಸ್ ಬಗ್ಗೆಯೂ ಸುದ್ದಿ ಹಬ್ಬುವುದಕ್ಕೆ ಶುರುವಾಗಿದೆ.

ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

Tags:    

Similar News