ನಟ ಉಪೇಂದ್ರ ಜೊತೆ ಹೊಸ ಸಿನಿಮಾ ಘೋಷಿಸಿದ ಹಿರಿಯ ನಿರ್ದೇಶಕ ಓಂ ಪ್ರಕಾಶ್
ಉಪೇಂದ್ರ ‘ಗೆರಿಲ್ಲಾ ವಾರ್’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾನಲ್ಲಿ ಸೈನಿಕನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ.;
ನಟ ಉಪೇಂದ್ರ
ನಟ ಉಪೇಂದ್ರ ಜೊತೆ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದು, ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಮುನ್ನಾ ದಿನವೇ ಶುಭಾಶಯ ಕೋರಲಾಗಿದೆ. ಗುರುವಾರ (ಸೆಪ್ಟೆಂಬರ್ 18) ನಟ ಉಪೇಂದ್ರ ಅವರು ಹುಟ್ಟುಹಬ್ಬವಿದೆ.
ಓಂಪ್ರಕಾಶ್ ರಾವ್ ʻAK 47ʼ, ʻಲಾಕಪ್ ಡೆತ್ʼ, ʻಕಲಾಸಿಪಾಳ್ಯʼ, ʻಹುಚ್ಚʼ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಉಪೇಂದ್ರ ‘ಗೆರಿಲ್ಲಾ ವಾರ್’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾನಲ್ಲಿ ಸೈನಿಕನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ.
ಇದು ಓಂ ಪ್ರಕಾಶ್ ನಿರ್ದೇಶನ ಮಾಡಲಿರುವ 50ನೇ ಆಗಿರುವುದು ಮತ್ತೊಂದು ವಿಶೇಷ. ‘ಗೆರಿಲ್ಲಾ ವಾರ್’ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಪೋಸ್ಟರ್ನಲ್ಲಿ ಉಪೇಂದ್ರ ಸೈನಿಕರ ಸಮವಸ್ತ್ರ ಧರಿಸಿ ಅತ್ಯಾಧುನಿಕ ಬಂದೂಕು ಹಿಡಿದು ಯಾವುದೋ ಮಿಲಿಟರಿ ಆಪರೇಷನ್ನಲ್ಲಿ ತೊಡಗಿರುವುದು ಕಾಣುವಂತಿದೆ.
ಈ ಸಿನಿಮಾವನ್ನು ಬೇಬಿ ಇಂಚರ ಅರ್ಪಿಸುತ್ತಿದ್ದು, ಎನ್.ಎಸ್.ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಡೆನ್ನಿಸಾ ಪ್ರಕಾಶ್ ಬರೆದಿರುವ ಕಥೆಗೆ ಓಂಪ್ರಕಾಶ್ ರಾವ್ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರು ಹಾಡುಗಳನ್ನು ಬರೆದು ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ, ದೀಪು ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ.
ಉಪೇಂದ್ರ ಅವರಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಅಚ್ಯುತ್ ರಾವ್, ಭಾಸ್ಕರ್ ಶೆಟ್ಟಿ, ಆರಾಧ್ಯ, ಶ್ವೇತ ವೀರೇಶ್ ಮುಂತಾದವರು ನಟಿಸಲಿದ್ದಾರೆ.