ವಿಜಯ್‌ ರಾಘವೇಂದ್ರ ನಟನೆಯ ‘ಗ್ರೇ ಗೇಮ್ಸ್‌​​​​’ಗೆ 25 ದಿನ

ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌

Update: 2024-06-04 15:07 GMT
ನಟ ವಿಜಯರಾಘವೇಂದ್ರ
Click the Play button to listen to article

ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಸಂಭ್ರಮಿದೆ. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.

ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

ನಿರ್ಮಾಪಕ ಆನಂದ್ ಮುಗದ್‌ ಮಾತನಾಡಿ, ʻʻಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆʼʼ ಎಂದರು.

ʻʻನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡುವುದಕ್ಕಿಂತ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. “ಗ್ರೇ ಗೇಮ್ಸ್” ಅನ್ನು ಜನ ಮೆಚ್ಚಿಕೊಂಡಿದ್ದಾರೆʼʼ ಎಂದು ನಟ ವಿಜಯ ರಾಘವೇಂದ್ರ ತಿಳಿಸಿದರು.

ಇನ್ನು ಈ ಸಿನಿಮಾದಲ್ಲಿ ನಟಿಸಿರುವ ಯುವ ನಟ ಜೈ ʻʻನನ್ನ ಮಾವ ವಿಜಯ್ ರಾಘವೇಂದ್ರ ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆʼʼ ಎಂದರು.

ನಟಿ ಭಾವನರಾವ್ ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags:    

Similar News