ವಿಜಯ ರಾಘವೇಂದ್ರ ಅಭಿನಯದ ʼಜೋಗ್ 101ʼ ಬಿಡುಗಡೆ ಡೇಟ್ ಫಿಕ್ಸ್
ವಿಜಯ್ ರಾಘವೇಂದ್ರ ಅಭಿನಯದ ʼಜೋಗ್ 101ʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ.;
ವಿಜಯ್ ರಾಘವೇಂದ್ರ ಅಭಿನಯದ ʼಜೋಗ್ 101ʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ.
ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಟ ವಿಜಯ್ ರಾಘವೇಂದ್ರ, ʼಜೋಗ್ 101ʼ ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆಕ್ಷನ್ ಥ್ರಿಲ್ಲರ್ ಸಿನಿಮಾ. ಇದರಲ್ಲಿ ಲವ್, ಕಾಮಿಡಿ ಹೀಗೆ ಎಲ್ಲಾ ಅಂಶಗಳು ಇದೆ. ಅವಿನಾಶ್ ಆರ್ ಬಾಸೂತ್ಕರ್ ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ನನ್ನ ಚಿತ್ರಗಳಲ್ಲಿ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದು ಇರಲಿಲ್ಲ. ʼಜೋಗ್ 101ʼ ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ ಎಂದರು.
ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡ್ಡಿ ಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ ʼಜೋಗ್ 101ʼ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿಜಯ್ ಕನ್ನಡಿಗ ನಿರ್ದೇಶನದ ಈ ಸಿನಿಮಾ ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗಿದೆ.