ಕಾನ್ ಫಿಲ್ಮ್ ಫೆಸ್ಟಿವಲ್ ಪ್ರಶಸ್ತಿ ಗೆದ್ದ ಕಿರುಚಿತ್ರತಂಡಕ್ಕೆ ಶುಭ ಕೋರಿದ ಯಶ್
ವಿಶ್ವದ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ 'ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ' ಕಿರುಚಿತ್ರಕ್ಕೆ ಪ್ರತಿಷ್ಠಿತ 'ಲಾ ಸಿನೆಫ್' ಪ್ರಶಸ್ತಿ ಲಭಿಸಿದೆ.;
ವಿಶ್ವದ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ 'ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ' ಕಿರುಚಿತ್ರಕ್ಕೆ ಪ್ರತಿಷ್ಠಿತ 'ಲಾ ಸಿನೆಫ್' ಪ್ರಶಸ್ತಿ ಲಭಿಸಿದೆ.
ಕನ್ನಡಿಗ ಚಿದಾನಂದ್ ನಾಯ್ಕ್ ನಿರ್ದೇಶಿಸಿದ 'ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ' ಕಿರುಚಿತ್ರ ಗೆದ್ದಿದ್ದಕ್ಕೆ ರಾಕಿಂಗ್ ಸ್ಟಾರ್ ಯಶ್ ಖುಷಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಟ ಯಶ್ ಟ್ವೀಟ್ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ.
"ಸನ್‌ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ ಕಿರುಚಿತ್ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ಲಾ ಸಿನೆಫ್' ಪ್ರಶಸ್ತಿಯನ್ನು ಗೆದ್ದಿದ್ದಕ್ಕೆ ಚಿದಾನಂದ್ ನಾಯ್ಕ್ ಅವರಿಗೆ ಅಭಿನಂದನೆಗಳು. ಕನ್ನಡದ ಜಾನಪದವನ್ನು ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಕ್ಕೆ ಹಾಗೂ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಕ್ಕಾಗಿ ನಿಮ್ಮ ಮೇಲೆ ಹೆಮ್ಮೆಯಾಗುತ್ತಿದೆ" ಎಂದು ಯಶ್ ತನ್ನ ಎಕ್ಸ್ ಖಾತೆಯಲ್ಲಿ ಬರೆದು ಶುಭಕೋರಿದ್ದಾರೆ.
'ಸನ್‌ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ' ಸಿನಿಮಾ ಕಥೆಯು ಕನ್ನಡದ ಜನಪ್ರಿಯ ಜಾನಪದ ಕಥೆಯಿಂದ ಪ್ರೇರಿತಗೊಂಡಿದ್ದು, ಹಳ್ಳಿಯ ಕೋಳಿಯನ್ನು ವಯಸ್ಸಾದ ಮುದುಕಿ ಕದಿಯುವ ಕಥೆಯಾಗಿದ್ದು, ನಂತರ ಆ ಹಳ್ಳಿಯಲ್ಲಿ ಏನೆಲ್ಲ ಬದಲಾವಣೆಗಳು ಆಗುತ್ತವೆ ಎಂಬುವುದನ್ನು ಈ ಕಿರುಚಿತ್ರದಲ್ಲಿ ತೋರಿಸಲಾಗಿದೆ.
ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದೆ.