ಝೈದ್ ಖಾನ್ ಅಭಿನಯದ ಮುಂದಿನ ಚಿತ್ರ ʼಕಲ್ಟ್ʼ: ಸಿನಿಮಾ ಪೋಸ್ಟರ್ ಬಿಡುಗಡೆ

ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ಕಲ್ಟ್’ ಎನ್ನುವ ಶೀರ್ಷಿಕೆ ಇಡಲಾಗಿದೆ.;

Update: 2024-04-10 06:54 GMT
ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
Click the Play button to listen to article

ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ʼಬನಾರಸ್ʼ ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈಗ ಅವರ ಎರಡನೇ ಚಿತ್ರದ ಟೈಟಲ್ ಘೋಷಣೆ ಆಗಿದೆ. ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ಕಲ್ಟ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ಉಪಾಧ್ಯಕ್ಷ’ ಚಿತ್ರದ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ಅನಿಲ್ ಕುಮಾರ್ ಅವರು ‘ಕಲ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ನಮ್ಮ ಚಿತ್ರಕ್ಕೆ "ಕಲ್ಟ್" ಎಂದು ಹೆಸರಿಡಲಾಗಿದೆ. ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಸಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತವಾಗಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಿರಲಿದೆ‌‌. ಹಾಗಾಗಿ ಚಿತ್ರಕ್ಕೆ ʼಕಲ್ಟ್ʼ ಶೀರ್ಷಿಕೆ ಇಡಲಾಗಿದೆ‌. ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ʼಬನಾರಸ್ʼ ಚಿತ್ರದಲ್ಲಿ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ‌‌. ಫಸ್ಟ್ ಲುಕ್ ಪೋಸ್ಟರ್ ನಲ್ಲಿರುವ ಝೈದ್ ಖಾನ್ ಅವರ ರಗಡ್ ಲುಕ್ ಗೆ ಯುವಕರು ಫಿದಾ ಆಗಿದ್ದಾರೆ‌. ಸದ್ಯದಲ್ಲೇ ʼಕಲ್ಟ್ʼ ಸೆಟ್ಟೇರಲಿದೆ. ಅದ್ದೂರಿ ಮುಹೂರ್ತದೊಂದಿಗೆ ಚಿತ್ರಕ್ಕೆ ಚಾಲನೆ ಸಿಗಲಿದೆ. ಆ ಸಂದರ್ಭದಲ್ಲಿ ಚಿತ್ರದ ಕುರಿತು ಸಾಕಷ್ಟು ಮಾಹಿತಿ ನೀಡುವುದಾಗಿ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

‘ಆಶ್ರಿತ್ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಜೆ.ಎಸ್ ವಾಲಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags:    

Similar News