ಮೋದಿ, ಫ್ರಾನ್ಸ್​ ಪ್ರಧಾನಿ ಮ್ಯಾಕ್ರನ್ ಮಹತ್ವದ ಮಾತುಕತೆ

ಪ್ರಧಾನಿ ಮೋದಿ ಅವರ ಹೇಳಿಕೆಗೆ ಆತ್ಮೀಯವಾಗಿ ಸ್ಪಂದಿಸಿರುವ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್, "ನಮ್ಮ ಎರಡೂ ರಾಷ್ಟ್ರಗಳು ಒಗ್ಗಟ್ಟಾಗಿ ಸಾಗಿದಾಗ ನಾವು ಹೆಚ್ಚು ಬಲಶಾಲಿಯಾಗುತ್ತೇವೆ. ಭಾರತ ಮತ್ತು ಫ್ರಾನ್ಸ್ ನಡುವಿನ ಈ ಸ್ನೇಹ ಸದಾ ಚಿರಾಯುವಾಗಲಿ," ಎಂದು ಹಾರೈಸಿದ್ದಾರೆ.

Update: 2025-11-23 05:09 GMT

ಮೋದಿ, ಫ್ರಾನ್ಸ್​ ಪ್ರಧಾನಿ ಮ್ಯಾಕ್ರನ್ 

Click the Play button to listen to article

ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾನುವಾರ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ನಾಯಕರು ಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಬಾಂಧವ್ಯದ ಮಹತ್ವವನ್ನು ಪುನರುಚ್ಚರಿಸಿದ್ದಾರೆ.

ಶೃಂಗಸಭೆಯ ವೇಳೆ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿಯಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, "ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಜಿ-20 ಶೃಂಗದಲ್ಲಿ ಭೇಟಿಯಾಗಿದ್ದು ಸಂತಸ ತಂದಿದೆ. ನಾವು ವಿವಿಧ ಕ್ಷೇತ್ರಗಳಲ್ಲಿನ ಸಹಕಾರ ಮತ್ತು ಜಾಗತಿಕ ವಿದ್ಯಮಾನಗಳ ಬಗ್ಗೆ ವಿಚಾರ ವಿನಿಮಯ ನಡೆಸಿದೆವು. ಜಾಗತಿಕ ಒಳಿತಿಗಾಗಿ ಭಾರತ ಮತ್ತು ಫ್ರಾನ್ಸ್ ನಡುವಿನ ಮೈತ್ರಿ ಪ್ರಬಲ ಶಕ್ತಿಯಾಗಿ ಮುಂದುವರಿಯಲಿದೆ," ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ ಅವರ ಹೇಳಿಕೆಗೆ ಆತ್ಮೀಯವಾಗಿ ಸ್ಪಂದಿಸಿರುವ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್, "ನಮ್ಮ ಎರಡೂ ರಾಷ್ಟ್ರಗಳು ಒಗ್ಗಟ್ಟಾಗಿ ಸಾಗಿದಾಗ ನಾವು ಹೆಚ್ಚು ಬಲಶಾಲಿಯಾಗುತ್ತೇವೆ. ಭಾರತ ಮತ್ತು ಫ್ರಾನ್ಸ್ ನಡುವಿನ ಈ ಸ್ನೇಹ ಸದಾ ಚಿರಾಯುವಾಗಲಿ," ಎಂದು ಹಾರೈಸಿದ್ದಾರೆ.

ಈ ಭೇಟಿಯ ಮೂಲಕ ಉಭಯ ದೇಶಗಳು ರಕ್ಷಣೆ, ವ್ಯಾಪಾರ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಮತ್ತಷ್ಟು ಗಾಢವಾಗಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿವೆ. ಜಿ-20 ಶೃಂಗಸಭೆಯು ಇಂತಹ ದ್ವಿಪಕ್ಷೀಯ ಮಾತುಕತೆಗಳಿಗೆ ವೇದಿಕೆಯಾಗಿದ್ದು, ಪ್ರಧಾನಿ ಮೋದಿ ಅವರು ಶೃಂಗದ ನೇಪಥ್ಯದಲ್ಲಿ ಹಲವು ವಿಶ್ವ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.

Tags:    

Similar News