ಪಾಕಿಸ್ತಾನದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ; 20 ಸಾವು, 30 ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ; 20 ಸಾವು, 30 ಮಂದಿಗೆ ಗಾಯ;

Update: 2024-11-09 07:48 GMT
ಬಾಬ್‌ ಸ್ಫೋಟಕ್ಕೆ ಚೆಲ್ಲಾಪಿಲ್ಲಿಯಾಗಿರುವ ವಸ್ತುಗಳು.

ಪಾಕಿಸ್ತಾನದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟ ಘಟನೆಯಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲು ರೈಲ್ವೆ ನಿಲ್ದಾಣದ ಬುಕಿಂಗ್ ಸೆಂಟರ್‌ನಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಜಾಫರ್ ಎಕ್ಸ್‌ಪ್ರೆಸ್‌ ರೈಲು ಬೆಳಿಗ್ಗೆ 9 ಗಂಟೆಗೆ ಪೇಶಾವರಕ್ಕೆ ಹೊರಡಬೇಕಿತ್ತು ಎಂದು ರೈಲ್ವೆ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಸ್ಫೋಟ ಸಂಭವಿಸಿದಾಗ ರೈಲು ಇನ್ನೂ ಪ್ಲಾಟ್ ಫಾರ್ಮ್ ಗೆ ಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಲ್ದಾಣದ ದೊಡ್ಡ ಜನಸಂದಣಿ ಇದ್ದ ಕಾರಣ ದೊಡ್ಡ ಮಟ್ಟದಲ್ಲಿ ಸಾವುನೋವುಗಳ ಹೆಚ್ಚಿನ ಅಪಾಯವಿದೆ ಎಂದು ವರದಿ ತಿಳಿಸಿದೆ. 

Tags:    

Similar News