ತುಮಕೂರು; 20 ನವಿಲುಗಳ ಅನುಮಾನಾಸ್ಪದ ಸಾವು

ನವಿಲುಗಳ ಸಾವಿನ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಾಧೀಶರ ಅನುಮತಿ ಬಳಿಕ ಮೃತ ನವಿಲುಗಳ ಕಳೇಬರಗಳನ್ನು ಎಫ್‌ಎಸ್‌ಎಲ್‌ ​ಗೆ ರವಾನೆ ಮಾಡಲಾಗಿದೆ.;

Update: 2025-08-04 08:42 GMT

ಅನುಮಾನಾಸ್ಪದವಾಗಿ‌ ಮೃತಪಟ್ಟಿರುವ ನವಿಲುಗಳು  

ರಾಜ್ಯದಲ್ಲಿ ಇತ್ತೀಚೆಗೆ ಐದು ಹುಲಿಗಳ ಸಾವು ಪ್ರಕರಣ ಮಾಸುವ ಮುನ್ನವೇ ತುಮಕೂರಿನಲ್ಲಿ 20 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ 5 ಗಂಡು ಹಾಗೂ 15 ಹೆಣ್ಣು ಸೇರಿ ಒಟ್ಟು 20 ನವಿಲುಗಳು ಮೃತಪಟ್ಟಿರುವುದು ಪತ್ತೆಯಾಗಿದೆ. 

ಬೆಳಿಗ್ಗೆ ರೈತರು ಜಮೀನಿಗೆ ಬಂದಾಗ ನವಿಲುಗಳ ಮೃತದೇಹಗಳು ಕಂಡು ಬಂದಿವೆ. ಆಗಸ್ಟ್ 1ರ ರಾತ್ರಿ ನವಿಲುಗಳು ಮೃತಪಟ್ಟಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ನವಿಲುಗಳು ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನವಿಲುಗಳ ಸಾವಿನ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನ್ಯಾಯಾಧೀಶರ ಅನುಮತಿ ಬಳಿಕ ಎಫ್ಎಸ್ಎಲ್​ಗೆ ರವಾನೆ ಮಾಡಲಾಗಿದೆ. ನವಿಲುಗಳ ನಿಗೂಢ ಸಾವಿನ ವರದಿ ಪಡೆಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಇತ್ತೀಚೆಗೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಹುಲಿಗಳನ್ನು ಕೊಂದ ಮೂವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಬಳಿಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದ ಹೊರವಲಯದಲ್ಲಿ ಬರೋಬ್ಭರಿ 18 ಕೋತಿಗಳ ಕಳೇಬರಗಳು ಪತ್ತೆಯಾಗಿದ್ದವು. ವಿಷ ಸೇವಿಸಿ ನಿತ್ರಾಣವಾದ ವಾನರ ಸೇನೆಯನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಬಂದು ಕಂದೇಗಾಲ ಗ್ರಾಮದ ಹೊರವಲಯದಲ್ಲಿ ಬಿಸಾಡಿದ್ದರು.

Tags:    

Similar News