ಬೆಂಗಳೂರಿನಲ್ಲಿ ಒಂದೇ ದಿನ 26 ಸ್ಕೂಲ್ ಬಸ್ ಚಾಲಕರ ವಿರುದ್ಧ ಪ್ರಕರಣ ದಾಖಲು
ಪ್ರಕರಣ ದಾಖಲಿಸಿರುವ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185 ರ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರ ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಶಿಫಾರಸು ಮಾಡಲಾಗಿದೆ.;
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಸೋಮವಾರ ನಗರದಾದ್ಯಂತ ತಪಾಸಣೆ ನಡೆಸಿದ್ದು, ಒಟ್ಟು 3,676 ಶಾಲಾ ಬಸ್ಗಳು ಮತ್ತು ವ್ಯಾನ್ಗಳ ಪೈಕಿ 26 ಶಾಲಾ ಬಸ್ಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದು ಈ ವರ್ಷ ದಿನವೊಂದರಲ್ಲಿ ಶಾಲಾ ಬಸ್ಗಳ ಚಾಲಕರ ವಿರುದ್ಧ ದಾಖಲಿಸಲಾದ ಅತಿಹೆಚ್ಚಿನ ಸಂಖ್ಯೆಯ ಪ್ರಕರಣಗಳಾಗಿವೆ.
ಈ ಹಿಂದೆ ಒಂದು ತಿಂಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ ಕುಡಿದು ವಾಹನ ಚಲಾಯಿಸಿದ 23 ಚಾಲಕರು ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ವರ್ಷ ಇಲ್ಲಿಯವರೆಗೆ ಒಟ್ಟು 72 ಚಾಲಕರ ಮೇಲೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಇದು ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪ್ರಕರಣ ದಾಖಲಿಸಿರುವ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185 ರ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರ ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಶಿಫಾರಸು ಮಾಡಲಾಗಿದೆ.
ಶಾಲಾ ವಾಹನ ಚಾಲಕರ ವಿರುದ್ಧ ವಿಶೇಷ ಅಭಿಯಾನ
• ಆಗಸ್ಟ್ 5 ಒಟ್ಟು 3,676 ವಾಹನಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಒಟ್ಟು 26 ಚಾಲಕರ ವಿರುದ್ಧ ಪ್ರಕರಣ ದಾಖಲಾಗಿತ್ತು.
• ಜುಲೈ 9 ರಂದು 3,016 ಗಳಲ್ಲಿ 23 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
• ಫೆಬ್ರವರಿ 22 ರಂದು 2,059 ಶಾಲ ವಾಹನಗಳ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
• ಜನವರಿ 23 ರಂದು 3,414 ವಾಹನಗಳ ತಪಾಸಣೆಯಲ್ಲಿ 16 ಚಾಲಕರ ವಿರುದ್ಧ ಪ್ರಕರಣ ದಾಖಲಾಗಿತ್ತು.