KSRTC Bus Accident : ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್‌; 30 ಜನರಿಗೆ ಗಾಯ

KSRTC Bus Accident: ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಗಾಯಗೊಂಡವರನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.;

Update: 2025-04-10 07:24 GMT

ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌ 

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (KSRTC Bus Accident) ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. 

ಬಾಳೆಹೊನ್ನೂರು ಮೂರುಗದ್ದೆ-ಜಲದುರ್ಗ ನಡುವಿನ ಜಯಪುರ ಬಳಿ ನಿಯಂತ್ರಣ ತಪ್ಪಿದ ಬಸ್‌ ಪುಟ್ಟಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಬಿದ್ದಿದೆ. 

ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಗಾಯಗೊಂಡವರನ್ನು  ಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಡಿಕ್ಕಿ ಹೊಡೆದ  ಅ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ತಕ್ಷಣ ಸಹಾಯ ಮಾಡಿದರು. ಅಪಘಾತಕ್ಕೆ ಅತಿವೇಗವೇ ಪ್ರಮುಖ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಬಸ್ ಹಳೆಯದಾಗಿದ್ದು, ಸರಿಯಾಗಿ ನಿರ್ವಹಿಸದೇ ಇದ್ದ ಕಾರಣ ಅಘಘಾತ ಸಂಭವಿಸಿರಬಹುದು ಎಂದು ಇನ್ನು ಕೆಲವರು ಆರೋಪಿಸಿದ್ದಾರೆ. ಈ ಬಗ್ಗೆ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Similar News