ಗುತ್ತಿಗೆದಾರರು ಮಾಡಿದ 40 ಪರ್ಸೆಂಟ್ ಆರೋಪ ಸುಳ್ಳು: ಲೋಕಾಯುಕ್ತ ಪೊಲೀಸ್‌ ಷರಾ

ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ಬಹಿರಂಗಗೊಂಡಿದೆ.

Update: 2024-11-17 06:56 GMT
ಅಂಬಿಕಾಪತಿ

ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ. 

ಬಿಜೆಪಿ ಸರಕಾರದ ಅವಧಿಯಲ್ಲಿ ಬಿಬಿಎಂಪಿ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದಂತೆ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿಬಂದಿತ್ತು. ಅಂದಿನ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಈ ಬಗ್ಗೆ ಆರೋಪ ಮಾಡಿದ್ದು, ಆರೋಪದ 5 ಕುರಿತು ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು, 'ಬಿಬಿಎಂಪಿ ಗುತ್ತಿಗೆ ಪಡೆಯಲು ಮಧ್ಯವರ್ತಿಗಳು ಹಾಗೂ ಪಾಲಿಕೆ ಅಧಿಕಾರಿಗಳಿಗೆ ಶೇ. 40 ಸಾಕ್ಷ್ಯಾಧಾರ ಕಂಡು ಬಂದಿಲ್ಲ, ಇದೊಂದು ಆಧಾರ ರಹಿತ ಆರೋಪವಾಗಿದೆ' ಎಂದು ತನಿಖಾಧಿಕಾರಿ ಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ.  

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಅಂಬಿಕಾಪತಿ ಅವರು, "ಮೈದಾನ ಕಾಮಗಾರಿಯ ಗುತ್ತಿಗೆ ಸಲುವಾಗಿ ಪಾಲಿಕೆ ಪೂರ್ವ ವಿಭಾಗದ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳಿಗೆ ಕೋಟಿ ರೂ. ಕಮಿಷನ್ ನೀಡಿರುವ ಆರೋಪ ಮಾಡಿದ್ದರು. ಆದರೆ, ಈ ಆರೋಪದ ಸತ್ಯಾಸತ್ಯತೆ ಧೃಡವಾಗಿಲ್ಲ. ಎಂದು ಲೋಕಾಯುಕ್ತ ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ತನಿಖಾ ವರದಿಯಲ್ಲೇನಿದೆ?

ಆರೋಪ ಮಾಡಿರುವ ಅಂಬಿಕಾಪತಿ, ಬಿಬಿಎಂಪಿ ಪೂರ್ವ ವಿಭಾಗದಲ್ಲಿ ಕಳೆದ 6 ವರ್ಷಗಳಲ್ಲಿ ಆಟದ ಮೈದಾನಕ್ಕೆ ಸಂಬಂಧಿಸಿದ ಗುತ್ತಿಗೆ ಪಡೆಯದೇ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕುರಿತ ದಾಖಲೆಗಳನ್ನೂ ಪರಿಶೀಲಿಸಲಾಗಿದ್ದು, ಗುತ್ತಿಗೆದಾರ ಎನ್​ಎಂ ಕೃಷ್ಣಮೂರ್ತಿ ಕಾಮಗಾರಿ ಪೂರ್ಣಗೊಳಿಸಿರುವುದು ತಿಳಿದುಬಂದಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖವಾಗಿದೆ.

ಅಂಬಿಕಾಪತಿ ಎಂಬ ಗುತ್ತಿಗೆದಾರರು ಸುದ್ದಿ ವಾಹಿನಿಯೊಂದಕ್ಕೆ ಕೊಟ್ಟಿರುವ ಸಂದರ್ಶನದಲ್ಲಿ, ಆಟದ ಮೈದಾನದ ಕಾಮಗಾರಿಯ ಗುತ್ತಿಗೆಗಾಗಿ ಅಧಿಕಾರಿಗಳಿಗೆ ಮತ್ತು ಮಧ್ಯವರ್ತಿಗಳಿಗೆ ಲಂಚ ನೀಡಿದ್ದೇನೆ ಎಂದು ಹೇಳಿದ್ದರು. ತನಿಖೆ ನಡೆಸಿ ವರದಿಯನ್ನು ಸಲ್ಲಿಸಬೇಕೆಂದು ಕೋರಿ ಸಲ್ಲಿಕೆಯಾದ ಮನವಿ ಅನ್ವಯ  ದೂರು ದಾಖಲಿಸಿಕೊಳ್ಳಲಾಗಿತ್ತು.  ಪೊಲೀಸರು ತನಿಖೆ ನಡೆಸಿದ್ದು ಅಂಬಿಕಾಪತಿಯವರು ಯಾವ ದಿನಾಂದಂದು ಸಂದರ್ಶನ ಕೊಟ್ಟಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿರುವುದಿಲ್ಲ. ಆದರೆ ಕಳೆದ 5 ವರ್ಷಗಳ ಹಿಂದಿನ ಅವಧಿಯಲ್ಲಿಯೂ ಸಹ ಅಂಬಿಕಾಪತಿಯವರು ಬಿಬಿಎಂಪಿಯ ಪೂರ್ವವಲಯದಲ್ಲಾಗಲೀ, ಅಥವಾ ಇತರ ವಲಯಗಳಲ್ಲಿ ಯಾವುದೇ ಕಾಮಗಾರಿಯ ಗುತ್ತಿಗೆ ಪಡೆದಿರುವುದಿಲ್ಲ. ಆದ್ದರಿಂದ ಅವರು ಮಾಡಿರುವ ಆರೋಪಗಳು ಸುಳ್ಳು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Tags:    

Similar News