Wayanad Landslide | ಕನ್ನಡಿಗರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

Update: 2024-07-31 11:14 GMT

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ʻʻಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದಿದ್ದಾರೆ.

ʻʻಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆʼʼ ಎಂದು ತಿಳಿಸಿದ್ದಾರೆ.

ʻʻಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆʼʼ ಎಂದು ಹೇಳಿದ್ದಾರೆ.


Tags:    

Similar News