7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಶಾಲೆಯ ಆವರಣ ಹಾಗೂ ಹೊಲದ ಬಳಿ ಹಲವಾರು ಬಾರಿ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.;

Update: 2025-09-01 06:55 GMT

ರಾಜ್ಯದ ಯಾದಗಿರಿ, ಶಿವಮೊಗ್ಗ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರಿಗೆ ಹೆರಿಗೆಯಾದ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಬಾಗಲಕೋಟೆಯಲ್ಲೂ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಅಪ್ರಾಪ್ತನೊಬ್ಬ ಅತ್ಯಾಚಾರ ನಡೆಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಯಾಗಿರುವ ಘಟನೆ ನಡೆದಿದೆ. 

ವಸತಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿರುವುದು ತೀವ್ರ ಆತಂಕ ಮೂಡಿಸಿದೆ. ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ಅದೇ ಶಾಲೆಯ ಅಪ್ರಾಪ್ತ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಶಾಲೆಯ ಆವರಣ ಹಾಗೂ ಹೊಲದ ಬಳಿ ಹಲವಾರು ಬಾರಿ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.   

ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಷಯದ ಕುರಿತು ಬಾಗಲಕೋಟೆ ಎಸ್‌ಪಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಸೋಮವಾರ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. 

ಭಾನುವಾರವಷ್ಟೇ ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಕೆಯ ಮೇಲೆ ತನ್ನ ಸಹೋದರನೇ ನಿರಂತರ ಅತ್ಯಾಚಾರ ಎಸಗಿ, ಬಾಲಕಿ ಗರ್ಭ ಧರಿಸಲು ಕಾರಣನಾಗಿದ್ದ. ಆರೋಪಿ ಸಹೋದರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. 

ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ವಸತಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.  

Tags:    

Similar News