ಗ್ಯಾಸ್ ಸಿಲಿಂಡರ್ ಸ್ಫೋಟ; 8 ವರ್ಷದ ಬಾಲಕ ಸಾವು, 12 ಮಂದಿಗೆ ಗಾಯ
ಮೃತ ಬಾಲಕನ್ನು ಮುಬಾರಕ್ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.;
By : The Federal
Update: 2025-08-15 05:57 GMT
ಸಾಂದರ್ಭಿಕ ಚಿತ್ರ
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಬಾಲಕನೊಬ್ಬ ಮೃತಪಟ್ಟು, 12 ಮಂದಿ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ ನಡೆದಿದೆ.
ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.