ಲಿಫ್ಟ್ ಗುಂಡಿಯ ನೀರಿಗೆ ಬಿದ್ದು 7 ವರ್ಷದ ಬಾಲಕ ಸಾವು
ಲಿಫ್ಟ್ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು, 7 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ಬುಧವಾರ ನಡೆದಿದೆ. ಬಾಲಕನನ್ನು ಸುಹಾಸ್ ಗೌಡ ಎಂದು ಗುರುತಿಸಲಾಗಿದೆ.
ಲಿಫ್ಟ್ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು, 7 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ಬುಧವಾರ ನಡೆದಿದೆ. ಬಾಲಕನನ್ನು ಸುಹಾಸ್ ಗೌಡ ಎಂದು ಗುರುತಿಸಲಾಗಿದೆ. ಕನ್ನಮಂಗಲದ ನಿರ್ಮಾಣ ಹಂತದ ಹಾಲಿನ ಡೇರಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಟ್ಟಡದಲ್ಲಿ ಲಿಪ್ಟ್ ಗಾಗಿ 5 ಅಡಿ ಗುಂಡಿ ತೋಡಲಾಗಿತ್ತು. ಆ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದು, ಅಲ್ಲಿಯ ಸಿಬ್ಬಂಧಿ ಯಾವುದೇ ಮುನ್ನೆಚ್ಚರಿಕೆ ವಹಿಸದೇ ಇರುವುದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡೇರಿ ಅಧ್ಯಕ್ಷ ಸೊಣ್ಣಪ್ಪ, ಸೆಕ್ರೆಟರಿ ಸುನೀಲ್ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾರೀ ಮಳೆಯಿಂದ ಆ ಗುಂಡಿಯಲ್ಲಿ ನೀರು ತುಂಬಿದ್ದರೂ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸದ ಹಿನ್ನೆಲೆಯಲ್ಲಿ ಒಂದು ಜೀವ ಬಲಿಯಾಗಿದೆ.
ಭಾರೀ ಮಳೆಗೆ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಸಿಲುಕಿ ಆರಂಭದಲ್ಲಿ ನಾಲ್ಕು ಮಂದಿ ಕಾರ್ಮಿಕರ ಸಾವನ್ನಪ್ಪಿದ್ದರು. ನಂತರ ಸಾವನ್ನಪ್ಪಿದ ಕಾರ್ಮಿಕರ (Workers) ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದುವರೆಗೂ 13 ಕಾರ್ಮಿಕರನ್ನ ರಕ್ಷಣೆ ಮಾಡಲಾಗಿದ್ದು, ಗಾಯಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, NDRFನಿಂದ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗಿದೆ.