ಬೆಂಗಳೂರಲ್ಲಿ ಮಧ್ಯರಾತ್ರಿ ಯುವತಿ ಮೇಲೆ ಅತ್ಯಾಚಾರ

ಬೆಂಗಳೂರಿನಲ್ಲಿ ಕೂಡ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

Update: 2024-08-18 07:42 GMT
ಬೆಂಗಳೂರಿನಲ್ಲಿ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ.

ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಕೂಡ ಕಾಲೇಜು ಯುವತಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ಯುವತಿಯೊಬ್ಬಳು ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದು ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಇದೇ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ಆಕೆಯನ್ನು ಎಚ್ ಎಸ್ ಆರ್ ಬಡಾಬಣೆಯ ನಿರ್ಜನ ಪ್ರದೇಶದ ಗೋದಾಮು ಒಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಆಕೆಯನ್ನು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾನೆ. ಯುವತಿ ತನ್ನ ಸ್ನೇಹಿತೆಗೆ ಕರೆ ಮಾಡಿದ್ದಾಳೆ. ಆಕೆ ಬಂದು ಯುವತಿಯನ್ನು ಕರೆದುಕೊಂಡು ಹೋಗಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಸದ್ಯ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೆಚ್ ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ನಿಜ. ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಅತ್ಯಾಚಾರವಾಗಿದೆಯೇ ಎಂದು ವೈದ್ಯಕೀಯ ಪರೀಕ್ಷೆಯಿಂದ ದೃಢಪಡಲಿದೆ ಎಂದರು.

ಈ ರೀತಿಯ ಪ್ರಕರಣದಲ್ಲಿ ಕಾನೂನು ಪ್ರಕಾರ ಏನಿದೆಯೋ ಅದರಂತೆ ಪೊಲೀಸರು ಮಾಡುತ್ತಿದ್ದಾರೆ. ಮೆಡಿಕಲ್ ಟೆಸ್ಟ್ ಎಲ್ಲ ನಡೆಯುತ್ತಿದೆ ಎಂದರು.

Tags:    

Similar News