ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿಎಂ ಸಿದ್ದರಾಮಯ್ಯ

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು.;

Update: 2024-10-02 12:22 GMT
ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಂಧೀ ಜಯಂತಿಯ ಅಂಗವಾಗಿ ಗಾಂಧಿ ತತ್ವಗಳ ಬಗ್ಗೆ ಮಾತನಾಡಿದರು.
Click the Play button to listen to article

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಅವರು ಬುಧವಾರ ಮಾತನಾಡಿದರು.

ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ, ಬಿಡಲಿ; ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ್ಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

 ಸ್ವಚ್ಛತಾ ಪ್ರಮಾಣ ವಚನ ಸ್ವೀಕರಿಸಿದರು. 

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಅದೇ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ. ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾತಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವುದು ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್, "ಎಲ್ಲರ ಗಾಂಧಿ" ಕೃತಿಯ ಲೇಖಕರಾದ ನಟರಾಜ್ ಹುಳಿಯಾರ್ ಸೇರಿ‌ ಹಲವು ಸಾಧಕರು ಉಪಸ್ಥಿತರಿದ್ದರು.

ಗಾಂಧಿ ಪ್ರತಿಮೆವರೆಗೆ ನಡಿಗೆ

ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಬುಧವಾರ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗಾಂಧಿ ಭವನದಿಂದ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ನಡಿಗೆ ಮೆರವಣಿಗೆ ನಡೆಸಿದರು.

 ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗಾಂಧಿ ಭವನದಿಂದ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆವರೆಗೆ ಮೆರವಣಿಗೆ ನಡೆಸಿದರು.

ಗಾಂಧಿ ಜಯಂತಿ ಅಂಗವಾಗಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಹ ಮಹಾತ್ಮ ಗಾಂಧಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಗಾಂಧೀಜಿಯವರ ತತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶ್ವೇತವಸ್ತ್ರ ಧರಿಸಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಕಾನೂನು ಸಚಿವ ಎಚ್‌ಕೆ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರ ಸಚಿವರು ಪಾಲ್ಗೊಂಡರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಕಾನೂನು ಸಚಿವ ಎಚ್‌ಕೆ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರ ಸಚಿವರು ಪಾಲ್ಗೊಂಡರು.

ರಾಷ್ಟ್ರಧ್ವಜ ಹಿಡಿದು, ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ, ಬಿಗಿ ಭದ್ರತೆಯ ನಡುವೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಗಾಂಧಿ ನಡಿಗೆಯಲ್ಲಿ ಪಾಲ್ಗೊಂಡರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಚ್ಛತಾ ಪ್ರಮಾಣ ವಚನ ಸ್ವೀಕರಿಸಿದರು. 

ಗಾಂಧಿ ಜಯಂತಿಯ ಅಂಗವಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಸಿ.ಎಂ ಸಿದ್ದರಾಮಯ್ಯ,  "ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸಾಚಾರದಿಂದ ತುಂಬಿರುವ ಜಗತ್ತಿನಲ್ಲಿ, ಸತ್ಯ, ಶಾಂತಿ ಮತ್ತು ಅಹಿಂಸೆಯ ಮೂರ್ತರೂಪವಾದ ಮಹಾತ್ಮ ಗಾಂಧಿ ಮಾತ್ರ ನಮ್ಮನ್ನು ಕೈ ಹಿಡಿದು ಮುನ್ನಡೆಸಬಲ್ಲರು. ಸತ್ಯದ ನಿಜವಾದ ಪರೀಕ್ಷೆಯನ್ನು ಎದುರಿಸುವ ನನ್ನ ಪ್ರಸ್ತುತ ಹೋರಾಟದಲ್ಲಿಯೂ ಬಾಪು ಅವರ ಜೀವನ ಮತ್ತು ಆಲೋಚನೆಗಳು ನನಗೆ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿವೆ. ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳು" ಎಂದು ತಮ್ಮ ಮೇಲಿರುವ ತನಿಖೆಗಳನ್ನು ಉಲ್ಲೇಖಿಸದೆ ಪೋಸ್ಟ್‌ ಮಾಡಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸೋಮವಾರ ಎಫ್‌ಐಆರ್‌ಗೆ ಸಮಾನವಾದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿದೆ. ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಸೆಪ್ಟೆಂಬರ್ 27 ರಂದು ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ, ಅವರ ಪತ್ನಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Tags:    

Similar News