ಐದು ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ್ದ, ಆರೋಪಿ ಮೇಲೆ ಫೈರಿಂಗ್
ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಪ್ರಾಣಾಪಾಯದಿಂದ ಪಾರಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನವರಿ 13ರ ಸೋಮವಾರದಂದು ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚುಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದ.;
ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.
ಸೋಮವಾರ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಬಳ್ಳಾರಿ ಎಸ್ಪಿ ಡಾ. ಶೋಭಾರಾಣಿ ಮೂರು ತಂಡ ರಚನೆ ಮಾಡಿದ್ದರು. ತನಿಖೆಗೆ ಇಳಿದಿದ್ದ ಪೊಲೀಸರು ಕೊಪ್ಪಳದ ಹುಲಗಿಯಲ್ಲಿ ಆರೋಪಿ ಮಂಜುನಾಥ ಬಂಧನ ಮಾಡಿದ್ದರು. ಬಂಧನದ ಬಳಿಕ ಸ್ಥಳ ಪರಿಶೀಲನೆಗೆ ಹೋದಾಗ ಆರೋಪಿ ಮಂಜುನಾಥ, ಹೆಡ್ ಕಾನ್‌ಸ್ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ತಕ್ಷಣ ತೋರಣಗಲ್ ಪಿಎಸ್ಐ ಡಾಕೇಶ್ ಆತನ ಬಲಗಾಲಿಗೆ ಫೈರಿಂಗ್ ಮಾಡಿದ್ದಾರೆ. ಆತನನ್ನು ಈಗ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು ಅಪಾಯದಿಂದ ಪಾರಾಗಿದೆ ಎಂದು ಬಳ್ಳಾರಿ ಎಸ್‌ಪಿ ತಿಳಿಸಿದ್ದಾರೆ.
ಜನವರಿ 13ರ ಸೋಮವಾರದಂದು ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚುಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದ. ಆರೋಪಿಯ ಚಲನವಲದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಬಾರ್ ಒಂದರಲ್ಲಿ ಮದ್ಯಪಾನ ಮಾಡಿದ್ದ.