ಬೆಂಗಳೂರು ಘಟನೆ | ವ್ಯಕ್ತಿ ನಗ್ನಗೊಳಿಸಿ ಹಲ್ಲೆ: ಆರೋಪಿಗೆ ಗುಂಡೇಟು

ಪೊಲೀಸರಿಗೆ ಮಾಹಿತಿ ನೀಡಿದ್ದ ಎಂಬ ಕಾರಣಕ್ಕೆ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು ಎಂಬಾತನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.;

Update: 2024-09-17 06:47 GMT
ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು
Click the Play button to listen to article

ಪೊಲೀಸರಿಗೆ ಮಾಹಿತಿ ನೀಡಿದ್ದ ಎಂಬ ಕಾರಣಕ್ಕೆ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು ಎಂಬಾತನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

ಕೆಂಗೇರಿ ಬಳಿಯ ಉಲ್ಲಾಳದಲ್ಲಿ ಪವನ್ ಗೌಡ ಇದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆಗ ಆರೋಪಿ ಪವನ್ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ. ಆಗ ಆತ್ಮರಕ್ಷಣೆಗಾಗಿ ಪೊಲೀಸರು, ರೌಡಿ ಮೇಲೆ ಗುಂಡು ಹಾರಿಸಿದರು. ಪವನ್ ಕಾಲಿಗೆ ಗುಂಡೇಟು ಬಿದ್ದಿದೆ. ಘಟನೆಯಲ್ಲಿ ಕಾನ್‌ಸ್ಟೇಬಲ್‌ ವೆಂಕಟೇಶ್ ಅವರಿಗೂ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಏನಿದು ಪ್ರಕರಣ?

ರಾಜಗೋಪಾಲ ನಗರದ ರೌಡಿಶೀಟರ್ ಪವನ್ ಅಲಿಯಾಸ್ ಕಡಬು ಈತನ ವಿರುದ್ಧ ರಾಜಗೋಪಾಲನಗರ ಪೊಲೀಸರಿಗೆ ಮಾಹಿತಿ ನೀಡುತಿದ್ದ ವಿಶ್ವಾಸ್ ಎಂಬಾತನ ಮೇಲೆ ಸೋಮವಾರ ಆರೋಪಿ ಪವನ್ ಹಲ್ಲೆ ಮಾಡಿದ್ದಾನೆ. ತನ್ನ ಮೇಲೆ ನಡೆದ ಹಲ್ಲೆಯ ಬಗ್ಗೆ ವಿಶ್ವಾಸ್​ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಮಾಹಿತಿ ಪಡೆಯಲು ಮುಂದಾದ ಪೊಲೀಸರಿಗೆ ಕಳೆದ 12 ದಿನಗಳ ಹಿಂದೆ ನಡೆದಿರುವ ಮತ್ತೊಂದು ಹಲ್ಲೆಯ ಸಂಗತಿ ದೃಶ್ಯ ಸಮೇತ ಲಭ್ಯವಾಗಿದೆ. ಓರ್ವನ ಬಟ್ಟೆ ಬಿಚ್ಚಿಸಿ ನಗ್ನಗೊಳಿಸಿ ಹಲ್ಲೆ ಮಾಡಿದ್ದಲ್ಲದೆ, ಅದನ್ನು ವಿಡಿಯೋ ರೆಕಾರ್ಡ್ ಮಾಡಿರುವುದು ತಿಳಿದಿದೆ. ಈ ಎಲ್ಲ ಪ್ರಕರಣ ಸಂಬಂಧ ಆರೋಪಿ ಪವನ್​ನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ​ ಪರಾರಿಯಾಗಲು ಯತ್ನಿಸಿದ್ದ.

Tags:    

Similar News