Actor Darshan Case | ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಅ.28 ಕ್ಕೆ ಮುಂದೂಡಿದೆ.

Update: 2024-10-22 08:05 GMT
ನಟ ದರ್ಶನ್‌
Click the Play button to listen to article

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಅ.28 ಕ್ಕೆ ಮುಂದೂಡಿದೆ. ಜಾಮೀನು ವಿಚಾರಣೆಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ನಡೆಸಿತು.

ದರ್ಶನ್ ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ ಎಂದು ನಟನ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್ ದರ್ಶನ್‌ ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಕಾರಣ ನೀಡಿ ಜಾಮೀನು ನೀಡಬೇಕು. ದರ್ಶನ್ ಅವರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಆದಷ್ಟು ಬೇಗ ಜಾಮೀನು ನೀಡಬೇಕು ಎಂದು ನಾಗೇಶ್ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆದರೆ ವೈದ್ಯಕೀಯ ವರದಿಗಳನ್ನು ಸಲ್ಲಿಸುವಂತೆ ವಕೀಲರಿಗೆ ಸೂಚಿಸಿದ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು. ದರ್ಶನ್‌ ಜಾಮೀನು ಅರ್ಜಿಯನ್ನು ಇತ್ತೀಚೆಗೆ ವಿಚಾರಣಾ ನ್ಯಾಯಾಲಯ ವಜಾಗೊಳಿಸಿದ ಹಿನ್ನಲೆಯಲ್ಲಿ ನಟ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Tags:    

Similar News