Actor Darshan Case | ದರ್ಶನ್, ಪವಿತ್ರಾ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಹಾಗೂ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.;
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಹಾಗೂ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.
ದರ್ಶನ್ ಮತ್ತು ಪವಿತ್ರಾ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡ ಹಿನ್ನಲೆ ಅವರನ್ನು ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ನ್ಯಾಯಾಲಯ ಹೆಸರು ಕರೆಯುತ್ತಿದ್ದಂತೆಯೇ ಎಲ್ಲರೂ ಕೈಎತ್ತಿ ಹಾಜರಿ ಖಾತರಿಪಡಿಸಿದರು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಜು.18ರ ತನಕ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಪ್ರೇಯಸಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಿದ ಆರೋಪ ದರ್ಶನ್ ಹಾಗೂ ಗ್ಯಾಂಗ್ ಮೇಲಿದೆ.