Actor Darshan Case | ದರ್ಶನ್ ನ್ಯಾಯಾಂಗ ಬಂಧನದ ಅವಧಿ ಸೆ.30ರವರೆಗೆ ವಿಸ್ತರಣೆ

ರೇಣುಕಾ ಸ್ವಾಮಿಯನ್ನು ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್​ನ ನ್ಯಾಯಾಂಗ ಬಂಧನ ಅವಧಿ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ ಆಗಿದೆ.;

Update: 2024-09-17 10:06 GMT
ನಟ ದರ್ಶನ್‌
Click the Play button to listen to article

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್​ನ ನ್ಯಾಯಾಂಗ ಬಂಧನ ಅವಧಿ ಸೆ. 30ರವರೆಗೆ ವಿಸ್ತರಣೆ ಆಗಿದೆ.

ಮಂಗಳವಾರ (ಸೆ.17) ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಎದುರು ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಬಳ್ಳಾರಿ ಸೆಂಟ್ರಲ್​ ಜೈಲಿನಿಂದ ದರ್ಶನ್​, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಪವಿತ್ರಾ ಗೌಡ ಹಾಜರಾಗಿದ್ದರು. ಉಳಿದಂತೆ ತುಮಕೂರು, ಮೈಸೂರು, ಧಾರವಾಡ, ಕಲಬುರಗಿ, ವಿಜಯಪುರ, ಹಿಂಡಲಗಾ ಜೈಲಿನಿಂದ ಆರೋಪಿಗಳು ಹಾಜರಾಗಿದ್ದರು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಜಡ್ಜ್​ ಆದೇಶ ಹೊರಡಿಸಿದ್ದಾರೆ.

ಕುರ್ಚಿ ಬಗ್ಗೆ ಮತ್ತೊಮ್ಮೆ ಜಡ್ಜ್​ ಎದುರು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ‘ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ. ಆದರೆ, ದರ್ಶನ್​ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದರು.

‘ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ. ಅದು ಕೊಡಬೇಕು ಎಂದು ಆದೇಶ ಮಾಡುತ್ತೇನೆ’ ಎಂದು ಜಡ್ಜ್ ಹೇಳಿದರು.

Tags:    

Similar News