Actor Darshan Case | ದರ್ಶನ್ ಜಾಮೀನು ಆದೇಶ ಸೋಮವಾರಕ್ಕೆ ಕಾಯ್ದಿರಿಸಿದ ಕೋರ್ಟ್
ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್ಪಿಪಿ ಪ್ರಸನ್ನ ಕುಮಾರ್ ನಡುವೆ ವಾದ-ಪ್ರತಿವಾದಗಳು ನಡೆದಿವೆ. ಗುರುವಾರ ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದು, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ.;
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಗುರುವಾರವೂ ವಿಚಾರಣೆ ಮುಂದುವರಿಯಿತು. ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್ಪಿಪಿ ಪ್ರಸನ್ನ ಕುಮಾರ್ ನಡುವೆ ವಾದ-ಪ್ರತಿವಾದಗಳು ನಡೆದವು. ಗುರುವಾರ ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದು, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ.
ಅಕ್ಟೋಬರ್ 14 ರಂದು ಎ2 ಆರೋಪಿ ದರ್ಶನ್ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ತಿಳಿಯಲಿದೆ. ಅದೇ ದಿನ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ8 ರವಿಶಂಕರ್, ಎ8, ಎ11, ಎ12 ಹಾಗೂ ಎ13 ಅವರ ಜಾಮೀನು ಅರ್ಜಿಯ ಆದೇಶವೂ ಹೊರಬೀಳುವ ಸಾಧ್ಯತೆ ಇದೆ. ಅಕ್ಟೋಬರ್ 14 ರಂದು ಎ13 ದೀಪಕ್ಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ದೀಪಕ್ ಗೆ ಜಾಮೀನು ನೀಡಲು ಎಸ್ಪಿಪಿ ತಕರಾರು ಎತ್ತಿಲ್ಲ. ಆದರೆ ಇನ್ನುಳಿದ ಯಾವುದೇ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದಿದ್ದಾರೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ, ಭೀಕರವಾಗಿ ಹಲ್ಲೆ ಮಾಡಿ ಹತ್ಯೆಗೈದಿದ್ದರು ಎಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.