Actor Darshan Case| ತನಿಖೆಯಲ್ಲಿ ಸಚಿವರ, ಶಾಸಕರ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ
By : The Federal
Update: 2024-06-19 10:26 GMT
ಚಿತ್ರನಟ ದರ್ಶನ್ ಮತ್ತಿತರರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಶೇಷ ಅಭಿಯೋಜಕರನ್ನು ಬದಲಿಸಿ ಪ್ರಕರಣವನ್ನುಸಡಿಲಗೊಳಿಸಲು ಯತ್ನಿಸಲಾಗುತ್ತಿದೆ ಮತ್ತು ಅದಕ್ಕೆ ಕೆಲವು ಸಚಿವರ ಒತ್ತಡವಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಮಾಧ್ಯಮದ ಜತೆ ಮಾತನಾಡಿದ ಮುಖ್ಯಮಂತ್ರಿ, "ಎಸ್‌ಪಿಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ," ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.