Actor Darshan Case | ಮನೆ ಊಟ, ಹಾಸಿಗೆ, ಪುಸ್ತಕ ಕೋರಿ ಕೋರ್ಟ್‌ ಮೊರೆ ಹೋದ ನಟ ದರ್ಶನ್‌

ದರ್ಶನ್‌ ಪರ ವಕೀಲ ಪ್ರವೀಣ್ ತಿಮ್ಮಯ್ಯ ಅವರ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ಊಟ, ಹಾಸಿಗೆ, ಪುಸ್ತಕ, ಬಟ್ಟೆ, ಚಮಚವನ್ನು ಮನೆಯಿಂದ ತರಿಸಿಕೊಳ್ಳಲು ದರ್ಶನ್ ಕೋರ್ಟ್ ಮುಂದೆ ಬೇಡಿಕೆ ಇಟ್ಟಿದ್ದಾರೆ.;

Update: 2024-07-09 11:51 GMT
ನಟ ದರ್ಶನ್‌

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದಾರೆ. ನಟ ದರ್ಶನ್‌ಗೆ ಜೈಲಿನಲ್ಲಿ ನೀಡುತ್ತಿರುವ ಆಹಾರ ಸೇರುತ್ತಿಲ್ಲ. ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ಈ ಕಾರಣದಿಂದ ದರ್ಶನ್ ಅವರು ಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ನಟ ದರ್ಶನ್ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ವಕೀಲ ಪ್ರವೀಣ್ ತಿಮ್ಮಯ್ಯ ಅವರ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ಊಟ, ಹಾಸಿಗೆ, ಪುಸ್ತಕ, ಬಟ್ಟೆ, ಚಮಚವನ್ನು ಮನೆಯಿಂದ ತರಿಸಿಕೊಳ್ಳಲು ದರ್ಶನ್ ಕೋರ್ಟ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳು ಅನುಮತಿಸಿಲ್ಲ. ಜೈಲಿನಲ್ಲಿ ನೀಡುತ್ತಿರುವ ಊಟ ಅವರಿಗೆ ಜೀರ್ಣವಾಗುತ್ತಿಲ್ಲ. ಅವರಿಗೆ ಫುಡ್ ಪಾಯ್ಸನಿಂಗ್‌  ಆಗುತ್ತಿದೆ. ಇದರ ಜೊತೆಗೆ ಭೇದಿ ಕೂಡ ಆಗುತ್ತಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ಹೀಗೆಂದು ಜೈಲಿನ ವೈದ್ಯರೇ ಅಭಿಪ್ರಾಯ ನೀಡಿದ್ದಾರೆ.

ಮನೆ ಊಟಕ್ಕೆ ಅನುಮತಿ ಕೋರಿದ್ದಕ್ಕೆ ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ’ ಎಂದು ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ. ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆಯಾಗಲ್ಲ. ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ನೀಡಬೇಕು’ ಎಂದು ದರ್ಶನ್ ಪರ ವಕೀಲರು ಕೋರಿದ್ದಾರೆ.

Tags:    

Similar News