ನಟ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ನಿಧನ
ತಮಿಳುನಾಡು ಮತ್ತು ಕರ್ನಾಟಕ ಗಡಿಭಾಗದಲ್ಲಿರುವ ಗಾಜನೂರಿನಲ್ಲಿ ನಾಗಮ್ಮ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು.;
By : The Federal
Update: 2025-08-01 07:16 GMT
ಅಣ್ಣಾವ್ರ ಸಹೋದರಿ ನಾಗಮ್ಮ ನಿಧನರಾಗಿದ್ದಾರೆ.
ನಟ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಗಾಜನೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ, ಅವರನ್ನು ಚಾಮರಾಜನಗರದ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕ ಗಡಿಭಾಗದಲ್ಲಿರುವ ಗಾಜನೂರಿನಲ್ಲಿ ನಾಗಮ್ಮ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ನಟ ಪುನೀತ್ ರಾಜ್‌ಕುಮಾರ್ ಅವರ ಮೇಲೆ ಅವರಿಗೆ ವಿಶೇಷ ಪ್ರೀತಿ ಇತ್ತು. ಪುನೀತ್ ರಾಜ್‌ಕುಮಾರ್ ಅವರ ನಿಧನದ ಸುದ್ದಿ ನಾಗಮ್ಮ ಅವರಿಗೆ ಆಘಾತವಾಗಬಹುದು ಎಂದು ತಿಳಿದು ಕುಟುಂಬದವರು ಈವರೆಗೂ ಆ ವಿಷಯವನ್ನು ತಿಳಿಸಿರಲಿಲ್ಲ.