ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್

ವಿದ್ಯಾರ್ಥಿಗಳು ಪ್ರಾಣವನ್ನು ಪಣಕ್ಕಿಟ್ಟು ಕಿಕ್ಕಿರಿದು ತುಂಬಿದ ಬಸ್‌ಗಳ ಹಿಂದೆ ಓಡುವ ಹಾಗೂ ಫುಟ್‌ಬೋರ್ಡ್​​ನಲ್ಲಿ ನಿಂತು ಪ್ರಯಾಣಿಸುವ ಕೆಲವು ವೀಡಿಯೊಗಳು ವೈರಲ್ ಆದ ನಂತರ ಕೆಎಸ್‌ಆರ್‌ಟಿಸಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

Update: 2024-06-26 10:18 GMT
ಕೆಎಸ್​ಆರ್​ಟಿಸಿ ಬಸ್‌
Click the Play button to listen to article

ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅವಶ್ಯಕತೆ ಇರುವ ಮಾರ್ಗಗಳಲ್ಲಿ ಪೀಕ್ ಅವರ್​​ಗಳಲ್ಲಿ ಹೆಚ್ಚುವರಿ ಬಸ್ ಓಡಿಸಲು ಮುಂದಾಗಿದೆ. ಹಲವೆಡೆ ಈಗಾಗಲೇ ಹೆಚ್ಚುವರಿ ಬಸ್ ಆರಂಭಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳ ಬೇಡಿಕೆ ಇರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳು ಪ್ರಾಣವನ್ನು ಪಣಕ್ಕಿಟ್ಟು ಕಿಕ್ಕಿರಿದು ತುಂಬಿದ ಬಸ್‌ಗಳ ಹಿಂದೆ ಓಡುವ ಹಾಗೂ ಫುಟ್‌ಬೋರ್ಡ್​​ನಲ್ಲಿ ನಿಂತು ಪ್ರಯಾಣಿಸುವ ಕೆಲವು ವೀಡಿಯೊಗಳು ವೈರಲ್ ಆದ ನಂತರ ಕೆಎಸ್‌ಆರ್‌ಟಿಸಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಗಮವು ಕ್ರಮ ಕೈಗೊಂಡಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷ ವಿಶೇಷವಾಗಿ ತುಮಕೂರು, ರಾಮನಗರ ಮತ್ತು ಚಿಕ್ಕಬಳ್ಳಾಪುರದಂತಹ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಬಸ್‌ ಸಮಸ್ಯೆಗಳನ್ನು ಎದುರಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಹೆಚ್ಚು ದೂರುಗಳಿರುವ ಮಾರ್ಗಗಳನ್ನು ಗುರುತಿಸಲಾಗಿದೆ. ನಾವು ತಕ್ಷಣವೇ ಆ ಮಾರ್ಗಗಳ ಸಮಸ್ಯೆಗಳನ್ನು ಒಂದೊಂದಾಗಿ ಪರಿಹರಿಸಲು ಪ್ರಾರಂಭಿಸಿದ್ದೇವೆ. ಅಂತಹ ಮಾರ್ಗಗಳಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಪೀಕ್ ಅವರ್‌ನಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಮಸ್ಯೆ ಇರುವ ಮಾರ್ಗಗಳಲ್ಲಿ ಮುಂಬರುವ ತಿಂಗಳುಗಳಲ್ಲಿ, 500 ಕ್ಕೂ ಹೆಚ್ಚು ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು. 2,000 ಹೆಚ್ಚಿನ ಸಿಬ್ಬಂದಿಯನ್ನು ಸೇರಿಸುತ್ತೇವೆ. ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಭರವಸೆ ನೀಡಿದರು.

Tags:    

Similar News