ನನ್ನ ಕ್ಷೇತ್ರಕ್ಕೆ ಹೋಗಲು ಭಯವಾಗುತ್ತಿದೆ: ಎಸ್ ಟಿ ಸೋಮಶೇಖರ್
ಶೋಭಾ ಕರಂದ್ಲಾಜೆ ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೆ ಎಂಬುವುದು ಗೊತ್ತಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಹೋಗಲು ಭಯ ಆಗುತ್ತಿದೆ.;
ಶೋಭಾ ಕರಂದ್ಲಾಜೆ ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೆ ಎಂಬುವುದು ಗೊತ್ತಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಹೋಗಲು ಭಯ ಆಗುತ್ತಿದೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಹಿಂದೆ ಈ ಕ್ಷೇತ್ರಕ್ಕೆ ಡಿ.ಬಿ.ಚಂದ್ರೇಗೌಡ ಸಂಸದರಾಗಿದ್ದರು, ಡಿವಿ ಸದಾನಂದಗೌಡ ಅವರು 10 ವರ್ಷ ಸಂಸದರಾಗಿದ್ದರು. ಒಂದೇ ಒಂದು ಸಣ್ಣ ವ್ಯತ್ಯಾಸವೂ ಆಗಿರಲಿಲ್ಲ. ಇದೀಗ ಯಶವಂತಪುರ ಕ್ಷೇತ್ರಕ್ಕೆ ಹೋಗುವುದಕ್ಕೆ ನಾನೇ ಭಯಪಡುತ್ತಿದ್ದೇನೆ. ಯಾರು ಏನು ಮಾತನಾಡ್ತಾರೋ, ಎತ್ತಿ ಕಟ್ಟುತ್ತಾರೋ ಎಂಬ ಭಯವಿದೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ್ ಕಿಡಿಕಾರಿದ್ದಾರೆ.
170 ಪುಟಗಳ ಉತ್ತರ
ಇನ್ನು ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಪಕ್ಷದ ಆದೇಶದ ವಿರುದ್ಧ ಹೋಗಿ ವಿಪ್ ಉಲ್ಲಂಘಿಸಿದ್ದಕ್ಕಾಗಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸೋಮಶೇಖರ್, ಬಿಜೆಪಿ ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ. ನೋಟಿಸ್‌ಗೆ ಸುದೀರ್ಘ ಉತ್ತರ ನೀಡಿದ್ದೇವೆ ಎಂದರು.