Leptospirosis| ಡೆಂಗ್ಯೂ ಬಳಿಕ ರಾಜ್ಯದಲ್ಲಿ ಇಲಿ ಜ್ವರದ ಭೀತಿ; ಮುನ್ನೆಚ್ಚರಿಕೆ ವಹಿಸಲು ಅರೋಗ್ಯ ಇಲಾಖೆ ಸೂಚನೆ

ಬೆಂಗಳೂರು ವೈದ್ಯರು ಇಲಿ ಜ್ವರದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಇಲಿಯ ಎಂಜಲು, ಮೂತ್ರ, ಮಲ ಅಥವಾ ಅದರ ದೇಹದ ಯಾವುದೇ ದ್ರವ ಮಾನವರ ಚರ್ಮಕ್ಕೆ ತಾಗುವುದರಿಂದ ಈ ಸೋಂಕು ಹರಡುತ್ತದೆ.;

Update: 2025-05-02 05:16 GMT

ರಾಜ್ಯದಲ್ಲಿ ಇಲಿ ಜ್ವರದ ಆತಂಕ ಎದುರಾಗಿದೆ. 

ರಾಜ್ಯದಲ್ಲಿ ಇಲಿ ಜ್ವರದ ಆತಂಕ ಎದುರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಒಂದು ವಾರದಲ್ಲಿ 169 ಜನರನ್ನು ಇಲಿ ಜ್ವರ ಪತ್ತೆ ಪರೀಕ್ಷೆಗೆ ಒಳಪಡಿಸಿದ್ದು 24 ಜನರಲ್ಲಿ ಇಲಿ ಜ್ವರದ ಸೋಂಕು ಪತ್ತೆಯಾಗಿದೆ.

ಜನವರಿಯಿಂದ ಇಲ್ಲಿವರೆಗೆ 3044 ಮಂದಿಯಲ್ಲಿ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಆರೋಗ್ಯ ಇಲಾಖೆ ಇಲಿ ಜ್ವರದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ.

ಲೆಪ್ಟೊಸ್ಪೈರೋಸಿಸ್ ಅಥವಾ ಇಲಿ ಜ್ವರವು ಇಲಿಗಳಿಂದ ಹರಡುತ್ತದೆ.  ಇಲಿಯ ಎಂಜಲು, ಮೂತ್ರ, ಮಲ ಅಥವಾ ಅದರ ದೇಹದ ಯಾವುದೇ ದ್ರವ ಮಾನವರ ಚರ್ಮಕ್ಕೆ ತಾಗುವುದರಿಂದ ಈ ಸೋಂಕು ಹರಡುತ್ತದೆ. ಸೋಂಕು ಉಂಟಾದ ಎರಡು ದಿನಗಳ ನಂತರ ಮತ್ತು ಕೀಲು ನೋವು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇಲಿ ಜ್ವರದ ಲಕ್ಷಣಗಳು ಏನು?

ತಲೆನೋವು, ಕಣ್ಣು ಕೆಂಪಾಗುವುದು, ವಾಕರಿಕೆ ಅಥವಾ ವಾಂತಿ,ಮೈಕೈ ನೋವು, ಮೈಮೇಲೆ ಗುಳ್ಳೆಗಳು, ತೀವ್ರ ಜ್ವರ ಕಾಣಿಸಿಕೊಳ್ಳಲಿದೆ.

ಸೋಂಕು ಉಂಟಾದ ಎರಡು ದಿನಗಳ ನಂತರ ಕೀಲುನೋವು ಕಂಡು ಬರಲಿದೆ. ಈ ಲಕ್ಷಣಗಳು ಕಂಡುಬಂದಲ್ಲಿ ತಡ ಮಾಡದೇ ವೈದ್ಯರನ್ನು ಸಂಪರ್ಕಿಸುವಂತೆ ಅರೋಗ್ಯ ಇಲಾಖೆ ಸಲಹೆ ನೀಡಿದೆ.

ಇಲಿ ಜ್ವರ ತಡೆಗೆ ಮುನ್ನೆಚ್ಚರಿಕೆ ಏನು?

ಇಲಿ ಜ್ವರದ ಆತಂಕ ಹೆಚ್ಚಾಗಿರುವುದರಿಂದ ಮನೆಯ ಸಂಪ್​, ದೈನಂದಿನ ಬಳಕೆಯ ನೀರಿನ ಬಗ್ಗೆ ಎಚ್ಚರ ವಹಿಸಬೇಕು. ಮನೆಯಲ್ಲಿ ಅಥವಾ ಉಗ್ರಾಣಗಳಲ್ಲಿ ಆಹಾರ ಪದಾರ್ಥಗಳು, ದವಸ ಧಾನ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡಿಕೊಳ್ಳುವುದರ ಮೂಲಕ ಹಾಗೂ ಸಾಧ್ಯವಾದಷ್ಟು ಬಿಸಿ ನೀರು ಸೇವನೆ ಮಾಡುವ ಮೂಲಕ ಇಲಿ ಜ್ವರ ಹರಡುವುದನ್ನು ನಿಯಂತ್ರಿಸಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ. 

Tags:    

Similar News