Weather Report | ಬೆಂಗಳೂರಿನಲ್ಲಿ ಬೆಳಿಗ್ಗೆಯೇ ತುಂತುರು; ವಿವಿಧ ಜಿಲ್ಲೆಗಳಲ್ಲಿ ಮಳೆ

Update: 2024-11-13 04:41 GMT
ರಾಜ್ಯದಲ್ಲಿ ಮತ್ತೆ ಮಳೆಯಾಗಿದೆ.

ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆ ಕೂಡ ಶುರುವಾಗಿದೆ. ಹೀಗಾಗಿಯೇ ಕೆಲಸಕ್ಕೆ ಹೋಗಬೇಕಾದ ಜನರು ಪರದಾಡುತ್ತಿದ್ದಾರೆ. ಹಾಗೇ ಇತರ ಜಿಲ್ಲೆಗಳಲ್ಲಿ ಕೂಡ ಹೀಗೆ ಮಳೆ ಅಬ್ಬರಿಸುವ ಮುನ್ನೆಚ್ಚರಿಕೆ ನೀಡಲಾಗಿದೆ. 

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ ಆರಂಭವಾಗಿದೆ. ಈ ಮಧ್ಯೆ ರಾಜಧಾನಿ ಬೆಂಗಳೂರು ಬಿಟ್ಟು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. 

ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, ಚಿಕ್ಕಬಳ್ಳಾಪುರ, ಕೋಲಾರ ಭಾಗವು ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಕೂಡ ಮಳೆ ಶುರುವಾಗಲಿದೆ. ಅದರಲ್ಲೂ ಮೈಸೂರು, ಮಂಡ್ಯ, ರಾಮನಗರ ಸುತ್ತಮುತ್ತ ಭಾರಿ ಮಳೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹಾಗೇ ಮತ್ತೊಂದು ಕಡೆ ಚಾಮರಾಜನಗರ ಜಿಲ್ಲೆ ಸೇರಿ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

Tags:    

Similar News