ಸಹೋದರಿ ಸೋಗಿನ ವಂಚನೆ ಪ್ರಕರಣ; ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್

ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.;

Update: 2025-06-17 09:48 GMT

ಡಿ.ಕೆ ಸುರೇಶ್‌

ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರಿಗೆ 3.25 ಕೋಟಿ ರೂ. ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಡಿ.ಕೆ. ಸುರೇಶ್‌ಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಐಶ್ವರ್ಯಗೌಡ ಎಂಬುವವರನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ಇಡಿ ಕೈಗೆತ್ತಿಕೊಂಡಿದೆ.

ಇಡಿ ಅಧಿಕಾರಿಗಳು ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ, ಡಿ.ಕೆ. ಸುರೇಶ್ ಅವರು ಜೂನ್ 23 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಅವರ ಮನೆ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು.

ಐಶ್ವರ್ಯ ಗೌಡ ಅವರ ಹೇಳಿಕೆಗಳು ಮತ್ತು ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಲು ಇಡಿ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣವು ಡಿ.ಕೆ. ಸುರೇಶ್ ಅವರ ಸುತ್ತಲೂ ಹೊಸದೊಂದು ಕಾನೂನು ಸಂಕಷ್ಟವನ್ನು ಸೃಷ್ಟಿಸಿದೆ. 

Tags:    

Similar News