ಆಳಂದ 'ವೋಟ್ ಚೋರಿ' ಪ್ರಕರಣ: ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಜನರ ಚಾರ್ಜ್‌ಶೀಟ್ ಸಲ್ಲಿಕೆ

ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ, ಪ್ರಮುಖ ಆರೋಪಿಗಳಾದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರ ಹರ್ಷಾನಂದ್ ಗುತ್ತೇದಾರ್ ಅವರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

Update: 2025-12-13 04:57 GMT

ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌

Click the Play button to listen to article

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದ ಆಳಂದ ಕ್ಷೇತ್ರದ 'ವೋಟ್ ಚೋರಿ' ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ ಮಹತ್ವದ ಬೆಳವಣಿಗೆಯೊಂದನ್ನು ಕಂಡಿದೆ. ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಬರೋಬ್ಬರಿ 22,000 ಪುಟಗಳ ಬೃಹತ್ ದೋಷಾರೋಪ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರ ಹರ್ಷಾನಂದ್ ಗುತ್ತೇದಾರ್ ಸೇರಿದಂತೆ ಒಟ್ಟು 7 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅಕ್ರಮವಾಗಿ ಮತಗಳನ್ನು ಸೇರ್ಪಡೆಗೊಳಿಸಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟು ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಇವರ ಮೇಲಿದೆ. ತನಿಖೆಯ ವೇಳೆ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳು ಮತ್ತು ದಾಖಲೆಗಳನ್ನು ಆಧರಿಸಿ ಈ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಜಾಮೀನು ಪಡೆದಿರುವ ಆರೋಪಿಗಳು

ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ, ಪ್ರಮುಖ ಆರೋಪಿಗಳಾದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರ ಹರ್ಷಾನಂದ್ ಗುತ್ತೇದಾರ್ ಅವರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಬಂಧನ ಭೀತಿಯಿಂದ ಪಾರಾಗಲು ಅವರು ಕಾನೂನು ಮೊರೆ ಹೋಗಿದ್ದರು. ಇದೀಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ಪ್ರಕರಣದ ವಿಚಾರಣೆ ಚುರುಕುಗೊಳ್ಳಲಿದ್ದು, ಆರೋಪಿಗಳಿಗೆ ಕಾನೂನು ಕುಣಿಕೆ ಬಿಗಿಯಾಗುವ ಸಾಧ್ಯತೆಯಿದೆ.

ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಸ್‌ಐಟಿ ನಡೆಸಿದ ಈ ತನಿಖೆ ಮತ್ತು ದೋಷಾರೋಪ ಪಟ್ಟಿ ಸಲ್ಲಿಕೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Tags:    

Similar News