Karnataka By-Election | ರೌಡಿಶೀಟರ್‌ಗೆ ಕಾಂಗ್ರೆಸ್ ಟಿಕೆಟ್ ಆರೋಪ: ಸ್ಪಷ್ಟೀಕರಣಕ್ಕೆ ಬೊಮ್ಮಾಯಿ ಆಗ್ರಹ
ಗ್ಯಾರೆಂಟಿಗಳು ಕೈ ಹಿಡಿಯಲಿವೆ ಎಂಬ ಕಾಂಗ್ರೆಸ್ಸಿಗರ ಕನಸು ನನಸಾಗದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಜನರು ಬೆಂಬಲ ಕೊಟ್ಟಿದ್ದರೋ ಅದೇ ರೀತಿ ಈಗಲೂ ತಮಗೆ ಜನ ಬೆಂಬಲ ಸಿಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು;
ರೌಡಿಶೀಟರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ಕುರಿತು ಅವರದ್ದೇ ಪಕ್ಷದ ಮುಖಂಡರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಸ್ಪಷ್ಟೀಕರಣ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.
ಶಿಗ್ಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ದೌರ್ಜನಕ್ಕೆ ಉಪ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಗ್ಯಾರೆಂಟಿಗಳು ಕೈ ಹಿಡಿಯಲಿವೆ ಎಂಬ ಕಾಂಗ್ರೆಸ್ಸಿಗರ ಕನಸು ನನಸಾಗದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಜನರು ಬೆಂಬಲ ಕೊಟ್ಟಿದ್ದರೋ ಅದೇ ರೀತಿ ಈಗಲೂ ತಮ್ಮ ಪುತ್ರನಿಗೆ ಜನ ಬೆಂಬಲ ಸಿಗಲಿದೆ ಎಂದರು.
ಸಚಿವ ಜಮೀರ್ ಅಹಮದ್ ಖಾನ್ ಸವಾಲಿನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸವಾಲು ಹಾಸ್ಯಾಸ್ಪದ. ಸತ್ಯಕ್ಕೆ ದೂರವಾಗಿದೆ ಎಂದರು.
ಶಿಗ್ಗಾವಿ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ನಡೆಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಒಗ್ಗಟ್ಟಾಗಿದ್ದೇವೆ. ಎಲ್ಲ ಸಮುದಾಯದವರು ಬೆಂಬಲ ಸೂಚಿಸಿದ್ದಾರೆ. ಈ ಚುನಾವಣೆಯಲ್ಲಿ ನನಗಿಂತ ಹೆಚ್ಚು ಬೆಂಬಲ ಭರತ್ ಬೊಮ್ಮಾಯಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಜಂ ಪೀರ್ ಖಾದ್ರಿ ಮನವೊಲಿಕೆ
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಜಂ ಪೀರ್ ಖಾದ್ರಿ ಅವರೊಂದಿಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಾಮಪತ್ರ ಹಿಂಪಡೆಯುವಂತೆ ಮನವೊಲಿಸಿದರು. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಹಾಜರಿದ್ದರು.