ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್​​​​ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಜು.10ರಂದು ಕಾಲೇಜಿನಿಂದ ಮನೆಗೆ ಬಂದಿದ್ದ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.;

Update: 2025-07-22 04:36 GMT

ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ

ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್​​​​ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ನಂದರಾಮಯ್ಯನ ಪಾಳ್ಯದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಮೂಲದ ಚನ್ನಕೇಶವ, ತುಳಸಿ ದಂಪತಿ ಪುತ್ರ ಅರುಣ್​​(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸೆಲ್ಫಿ ವಿಡಿಯೋ ಮಾಡಿ ಅದನ್ನು ಕಾಲೇಜಿನ ಗ್ರೂಪ್​ ಗೆ ಹಾಕಿ ಬಳಿಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದಿದ್ದ ಅರುಣ್, ಕುಂತಲ್ಲೇ 5 ನಿಮಿಷದಲ್ಲಿ ಗಣ್ಯರ ಹಾಗೂ ಸಿನಿಮಾ ತಾರೆಯರ ಭಾವಚಿತ್ರ ಬಿಡಿಸಿ ಮೆಚ್ಚುಗೆ ಗಳಿಸಿದ್ದ.

ಹಾಸನ ಜಿಲ್ಲೆಯ ಮೂಲದ ಚನ್ನಕೇಶವ, ತುಳಸಿ ದಂಪತಿ ನಂದರಾಮಯ್ಯನ ಪಾಳ್ಯದಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಮೂಟೆ ಹೊತ್ತು ಕೂಲಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದರು. ಅರಣ್‌ ಕಾಲೇಜಿನಲ್ಲಿ ಟಾಪರ್ ಆಗಿದ್ದ. ಜು.10ರಂದು ಕಾಲೇಜಿನಿಂದ ಮನೆಗೆ ಬಂದಿದ್ದ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ವಿಜಯಪುರದ ಅಲ್-ಅಮೀನ್ ವೈದ್ಯಕೀಯ ಕಾಲೇಜು ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್‌ ಓದುತ್ತಿದ್ದ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಮೂಲದ ಹಮೀಮ್ ಎಂಬ ಎಂಬಿಬಿಎಸ್ ವಿದ್ಯಾರ್ಥಿಗೆ 2019 ರ ಬ್ಯಾಚ್​​ನ ಹಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿರುವ ಘಟನೆ ನಡೆದಿತ್ತು. ರ‍್ಯಾಗಿಂಗ್​ಗೆ ಒಳಗಾಗಿರುವ ವೈದ್ಯಕೀಯ ವಿದ್ಯಾರ್ಥಿ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಜಮ್ಮುಕಾಶ್ಮೀರ ಮುಖ್ಯಮಂತ್ರಿ, ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಟ್ವೀಟ್‌ ಕೂಡ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಗ್ರಾಮಾಂತರ ಪೊಲೀಸರಿಂದ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. 

Tags:    

Similar News