ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ವಿ. ಅನ್ಬುಕುಮಾರ್​ ನೇಮಕ

ಕರ್ನಾಟಕದ ರಾಜ್ಯಪಾಲರ ಹೆಸರಿನಲ್ಲಿ ಈ ನಿರ್ದೇಶನವನ್ನು ಜಾರಿಗೆ ತರಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಆದೇಶಕ್ಕೆ ಸಹಿ ಮಾಡಿದ್ದಾರೆ.;

Update: 2025-07-08 11:10 GMT

ಕರ್ನಾಟಕದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಿ. ಅನ್ಬುಕುಮಾರ್​ (AKN: 2004) ಅವರನ್ನು ನೇಮಕ ಮಾಡಲಾಗಿದೆ. ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಅಂಬುಕುಮಾರ್ ಅವರನ್ನು ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಈ ನೇಮಕಾತಿ ನಡೆದಿದೆ. ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಬಿಡುಗಡೆಗೊಳಿಸಿ, ಚುನಾವಣಾ ಇಲಾಖೆಯ (ಚುನಾವಣೆಗಳು) ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ರಾಜ್ಯಪಾಲರ ಹೆಸರಿನಲ್ಲಿ ಈ ನಿರ್ದೇಶನವನ್ನು ಜಾರಿಗೆ ತರಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಆದೇಶಕ್ಕೆ ಸಹಿ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಣೆ ಹೊರಬೀಳಲಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶದ ಪ್ರತಿಗಳನ್ನು ರವಾನಿಸಲಾಗಿದೆ. 

Tags:    

Similar News