ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ಮುಕ್ತಿ
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.;
ಸಚಿವೆ ಲಕ್ಷೀ ಹೆಬ್ಬಾಳ್ಕರ್
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕರ್ತವ್ಯಗಳಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರೊಂದಿಗೆ ಸಿಬ್ಬಂದಿಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನಿರ್ಧಾರದ ಹಿನ್ನೆಲೆಯೇನು?
ಈ ನಿರ್ಧಾರದ ಹಿಂದೆ ಎರಡು ಪ್ರಮುಖ ಮತ್ತು ತಾರ್ಕಿಕ ಕಾರಣಗಳಿವೆ. ಮೊದಲನೆಯದಾಗಿ, ರಾಜ್ಯ ಸರ್ಕಾರವು ಮುಂಬರುವ ಅಕ್ಟೋಬರ್‌ನಿಂದ ಅಂಗನವಾಡಿ ಕೇಂದ್ರಗಳನ್ನು ಕೇವಲ ಪೌಷ್ಟಿಕ ಆಹಾರ ಮತ್ತು ಮಕ್ಕಳ ಪಾಲನಾ ಕೇಂದ್ರಗಳಾಗಿ ಉಳಿಸದೆ, ಅವುಗಳನ್ನು ಪೂರ್ವ-ಪ್ರಾಥಮಿಕ ತರಗತಿಗಳಾಗಿ (ಸರ್ಕಾರಿ ಮಾಂಟೆಸ್ಸರಿ) ಮೇಲ್ದರ್ಜೆಗೇರಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ, ಮೂಲಭೂತ ಕಲಿಕೆ (Foundational Learning) ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ನಿರ್ಣಾಯಕ. ಹೀಗಾಗಿ ಅವರನ್ನು ಚುನಾವಣೆ ಕಾರ್ಯದಿಂದ ಅವರಿಗೆ ಮುಕ್ತಿ ನೀಡಲಾಗಿದೆ.
ಎರಡನೆಯದಾಗಿ, ಶಿಕ್ಷಣದ ನಿರಂತರತೆಗೆ ಒತ್ತು ನೀಡುವುದು ಈ ನಿರ್ಧಾರದ ಪ್ರಮುಖ ಅಂಶ. ಚುನಾವಣಾ ಕರ್ತವ್ಯವು ಕನಿಷ್ಠ ಒಂದು ವಾರದಿಂದ ಹದಿನೈದು ದಿನಗಳವರೆಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಅವರ ಮೂಲ ಕೆಲಸದಿಂದ ದೂರವಿಡುತ್ತದೆ. ಇದರಿಂದಾಗಿ, ಹೊಸದಾಗಿ ಆರಂಭವಾಗಲಿರುವ ಪೂರ್ವ-ಪ್ರಾಥಮಿಕ ತರಗತಿಗಳಿಗೆ ಗಂಭೀರ ಅಡಚಣೆಯಾಗುತ್ತದೆ. ಹೀಗಾಗಿ ಅವರನ್ನು ಆ ಕೆಲಸದಿಂದ ಮುಕ್ತಿ ನೀಡಲಾಗಿದೆ.