ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ| ಮತ್ತೋರ್ವ ಆರೋಪಿ ಬಂಧನ

ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದ ಎನ್ನಲಾಗಿದೆ.;

Update: 2025-06-04 07:00 GMT

ಕೊಲೆಯಾಗಿರುವ ಸುಹಾಸ್‌ ಶೆಟ್ಟಿ 

ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಎಂದು ಗುರುತಿಸಲಾಗಿದೆ. ಅಬ್ದುಲ್ ರಜಾಕ್, ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್‌ನ ತಂದೆಯಾಗಿದ್ದು, ಪುತ್ರ ಮುಜಾಮಿಲ್ ಮತ್ತು ಅಳಿಯ ನೌಷಾದ್ ಜೊತೆ ಸೇರಿ ಸುಹಾಸ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹತ್ಯೆಯ ಬಳಿಕ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 1 ರಂದು ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಈ ಕೃತ್ಯವನ್ನು ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಜನವರಿಯಲ್ಲಿ ಸಫ್ವಾನ್ ತಂಡಕ್ಕೆ ಫಾಜಿಲ್ ಮತ್ತು ಆದಿಲ್ 3 ಲಕ್ಷ ರೂಪಾಯಿ ನೀಡಿದ್ದರು. ಕೊಲೆಗಾಗಿ ಪಿಕ್ ಅಪ್ ವಾಹನ ಮತ್ತು ಸ್ವಿಫ್ಟ್ ಕಾರನ್ನು ಬಳಸಲಾಗಿತ್ತು. ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಮತ್ತೊಂದು ಯೋಜನೆಯನ್ನು ಸಹ ಸಿದ್ಧಪಡಿಸಲಾಗಿತ್ತು. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ

Tags:    

Similar News