ತನಿಖಾಧಿಕಾರಿಗೆ ಬೆದರಿಕೆ | ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು

ಅನುಮತಿ ಕೋರಿದ ವಿಚಾರವಾಗಿ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಸುಳ್ಳ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ದುರುದ್ದೇಶಪೂರ್ವಕ ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Update: 2024-10-12 06:27 GMT
ಹೆಚ್‌ ಡಿ ಕುಮಾರಸ್ವಾಮಿ
Click the Play button to listen to article

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ನನಗೆ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರು ನೀಡಿದ್ದಾರೆ.

ನಾನು ಗಣಿಗಾರಿಗೆ ಸಂಬಂಧಿಸಿದ ಎಸ್‌ಐಟಿ ಎಡಿಜಿಪಿ ಆಗಿದ್ದೇನೆ. ಕುಮಾರಸ್ವಾಮಿ ಮೇಲೆ 2014ರಲ್ಲಿ ದಾಖಲಾದ ಪ್ರಕರಣ ತನಿಖೆ ಕೈಗೊಂಡಿದ್ದು, ತನಿಖೆ ವೇಳೆ ಅವರ ವಿರುದ್ಧ ಹೆಚ್ಚುವರಿ ಸಾಕ್ಷಗಳು ದೊರೆತಿದ್ದವು. ಹೀಗಾಗಿ ಕಾನೂನು ರೀತಿ ಕ್ರಮಕ್ಕೆ ರಾಜ್ಯಪಾಲರ ಅನುಮತಿಗೆ ಕೋರಲಾಗಿತ್ತು. ಅನುಮತಿ ಕೋರಿದ ವಿಚಾರವಾಗಿ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಸುಳ್ಳ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ದುರುದ್ದೇಶಪೂರ್ವಕ ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರು ನೀಡುವ ಮುನ್ನ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಸದಾಶಿವನಗರದಲ್ಲಿರುವ ಗೃಹ ಸಚಿವರ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದರು. ಎಚ್​​ಡಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧದ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ, ಮುಡಾ ಪ್ರಕರಣ ಸೇರಿ ಕೆಲ ಮಹತ್ವದ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತ ಪೊಲೀಸರು ನಡೆಸುತ್ತಿದ್ದಾರೆ. ಅಲ್ಲದೇ ಗವರ್ನರ್ ಕಚೇರಿಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಲೂ ಚಂದ್ರಶೇಖರ್ ಮುಂದಾಗಿದ್ದಾರೆ.

ಹಿರಿಯ ಪೊಲೀಸ್‌ ಅಧಿಕಾರಿಯೇ ಕೇಂದ್ರ ಸಚಿವರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿರುವುದರಿಂದ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.

Tags:    

Similar News