ಹೊಸ ಕಾನೂನುಗಳಿಗಾಗಿ ಆ್ಯಪ್ ಮಾಡಿದ್ದೇವೆ: ಡಾ. ಜಿ ಪರಮೇಶ್ವರ್‌

Update: 2024-07-01 08:27 GMT

ದೇಶದಲ್ಲಿ ಇಂದಿನಿಂದ ಮೂರು ಹೊಸ ಕಾನೂನುಗಳನ್ನು ಜಾರಿ ಮಾಡಲಾಗಿದ್ದು, ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಮೂರು ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಕ್ರಮವಾಗಿ ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ ಕಾಯಿದೆಗಳನ್ನು ಬದಲಿಸುತ್ತವೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ʻʻಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ನುಮುಂದೆ ದಾಖಲಾಗುವ ಕೇಸ್‌ಗಳಿಗೆ ಈ ಕಾನೂನುಗಳು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್‌ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆʼʼ ಎಂದು ಹೇಳಿದರು.

ಈ ಬಗ್ಗೆ ನಾವು ಕಾನ್ಸ್‌ಟೇಬಲ್‌ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ತಿಳಿಸಿದರು.

Tags:    

Similar News