ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ

ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ಯೋಜನೆಗಳು, ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಗಮನ ಹರಿಸಬೇಕು. ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.;

Update: 2025-04-03 08:47 GMT

ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆ ಪ್ರಸ್ತಾವಗಳಿಗೆ ಕೂಡಲೇ ಅನುಮೋದನೆ ನೀಡುವಂತೆ ಕೇಂದ್ರ ಜಲ ಸಂಪನ್ಮೂಲ ಖಾತೆ ಸಚಿವ ಸಿ. ಆರ್. ಪಾಟೀಲ ಅವರಿಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.

ನವದೆಹಲಿಯಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ಯೋಜನೆಗಳು, ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಗಮನ ಹರಿಸಬೇಕು. ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ರಾಜ್ಯದ ನೀರಾವರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಕಲ್ಯಾಣ ಖಾತ್ರಿಪಡಿಸುವ ಸಲುವಾಗಿ ಬಾಕಿ ಇರುವ ಪ್ರಸ್ತಾವಗಳಿಗೆ ಅನುಮೋದನೆ ನೀಡುವಂತೆ ಜಲಶಕ್ತಿ ಸಚಿವಾಲಯದ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನೀರಾವರಿ ಯೋಜನೆಗಳಿಂದ ರಾಜ್ಯದ ಕೃಷಿ ಕ್ಷೇತ್ರದ ಚಹರೆ ಬದಲಾಗಿದೆ. ಆಹಾರ ಉತ್ಪಾದನೆ ಹೆಚ್ಚಳ, ನವೀನ ತಂತ್ರಜ್ಞಾನದ ಅಳವಡಿಕೆಯೊಂದಿಗೆ ನೀರಿನ ನಿರ್ವಹಣೆಯ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Tags:    

Similar News