ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಿರಿಯ ಸಹಾಯಕರು 14, ಗಣಕಯಂತ್ರ ನಿರ್ವಾಹಕರು 4 , ಸಿಪಾಯಿಗಳು 16 , ರಾತ್ರಿ ಕಾವಲುಗಾರರು 8 , ವಾಹನ ಚಾಲಕರು 2 ಹಾಗೂ ಗನ್‌ ಮ್ಯಾನ್‌ ಒಂದು ಹುದ್ದೆ ಸೇರಿದಂತೆ ಒಟ್ಟು45 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.;

Update: 2025-09-16 08:50 GMT

ಸಾಂದರ್ಭಿಕ ಚಿತ್ರ

Click the Play button to listen to article

ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛೆಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಬ್ಯಾಂಕಿನ www.thejamkhandiurbanbank.com ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕ್‌ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ಸಿಪಾಯಿಗಳು, ರಾತ್ರಿ ಕಾವಲುಗಾರರು, ವಾಹನ ಚಾಲಕರು ಹಾಗೂ ಗನ್‌ ಮ್ಯಾನ್‌ಗಳೂ ಸೇರಿದಂತೆ ಒಟ್ಟು 45 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಸೆ.27 ಸಾಯಂಕಾಲ 5 ಘಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಖುದ್ದಾಗಿ, ಅಂಚೆ ಅಥವಾ ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಬ್ಯಾಂಕ್‌ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಯಾವ್ಯಾವ ಹುದ್ದೆಗಳು?

ಕಿರಿಯ ಸಹಾಯಕರು 14, ಗಣಕಯಂತ್ರ ನಿರ್ವಾಹಕರು 4 , ಸಿಪಾಯಿಗಳು 16 , ರಾತ್ರಿ ಕಾವಲುಗಾರರು 8 , ವಾಹನ ಚಾಲಕರು 2 ಹಾಗೂ ಗನ್‌ ಮ್ಯಾನ್‌ ಒಂದು ಹುದ್ದೆ ಸೇರಿದಂತೆ ಒಟ್ಟು45 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಕರ್ಷಕ ವೇತನ

ಕಿರಿಯ ಸಹಾಯಕರಿಗೆ 33450-62,600 ರೂ. ಗಣಕಯಂತ್ರ ನಿರ್ವಾಹಕರಿಗೆ 33450- 62,600 ರೂ. ಸಿಪಾಯಿಗಳಿಗೆ 21400- 42,000 ರೂ. ರಾತ್ರಿ ಕಾವಲುಗಾರರು, ವಾಹನ ಚಾಲಕರು ಹಾಗೂ ಗನ್ ಮ್ಯಾನ್‌ಗಳಿಗೆ  21400- 42,000 ರೂ. ವೇತನ ನಿಗದಿಪಡಿಸಲಾಗಿದೆ. 

ವಿದ್ಯಾರ್ಹತೆ 

ಕಿರಿಯ ಸಹಾಯಕ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಕಂಪ್ಯೂಟರ್ ಅಪ್ಲಿಕೇಷನ ಜ್ಞಾನವಿರಬೇಕು. ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಹೊಂದಿದ ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಗಣಕಯಂತ್ರ ನಿರ್ವಾಹಕ ಹುದ್ದೆಗಳಿಗೆ, ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ ಅಥವಾ ಇಂಗ್ಲಿಷ್ ಟೈಪ್ ರೈಟಿಂಗ್‌ನಲ್ಲಿ ಉತ್ತೀರ್ಣರಾಗಿದ್ದು ಅಥವಾ ಕಂಪ್ಯೂಟರ್ ಅಪ್ಲಿಕೇಷನ್​ ಜ್ಞಾನವಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಎಂಜಿನಿಯರಿಂಗ್‌ ಪದವಿಯನ್ನು ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಸಿಪಾಯಿ ಹುದ್ದೆಗಳಿಗೆ, ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ವಾಹನ ಚಾಲಕ ಹುದ್ದೆಗಳಿಗೆ ಕಾನೂನುಬದ್ಧ ಲಘು ವಾಹನ ಹಾಗೂ ಭಾರಿ ವಾಹನ ಚಾಲನೆ ಪರವಾನಗಿಯೊಂದಿಗೆ 5 ವರ್ಷದ ಅನುಭವ ಹೊಂದಿರಬೇಕು. ರಾತ್ರಿ ಕಾವಲುಗಾರ ಹಾಗೂ ಗನ್ ಮ್ಯಾನ್ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಹೊಂದಿರಬೇಕು ಹಾಗೂ  ಮಾಜಿ ಸೈನಿಕರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ ಹಾಗೂ ಶುಲ್ಕ

ಹಿರಿಯ ಸಹಾಯಕ ಹುದ್ದೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಹಾಗೂ 1,000 ರೂ. ಹಾಗೂ ಶೇ.18 ಜಿಎಸ್‌ಟಿ ಶುಲ್ಕ, ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ, ಸಾಮನ್ಯ ವರ್ಗದವರಿಗೆ 35 ವರ್ಷ ನಿಗದಿಪಡಿಸಲಾಗಿದ್ದು, 2,000 ರೂ ಹಾಗೂ ಶೇ.18 ಜಿಎಸ್‌ಟಿ ಶುಲ್ಕ ಪಾವತಿಸಬೇಕು.

ಸೂಚನೆಗಳು

ಲಿಖಿತ ಪರೀಕ್ಷೆಗೆ ಅರ್ಹವಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಲಿಖಿತ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗುವುದು. ಅರ್ಹ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಧಿಕೃತ ವೆಬ್ ಸೈಟ್ www.thejamkhandiurbanbank.com ದಿಂದ ಡೌನ್‌ಲೋಡ್ ಮಾಡಿಕೊಂಡು ಲಿಖಿತ ಪರೀಕ್ಷೆಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಹಾಜರಪಡಿಸತಕ್ಕದ್ದು. ಲಿಖಿತ ಪರೀಕ್ಷೆಗೆ ಅಥವಾ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು ಎಂದು ಬ್ಯಾಂಕ್‌ ಆಡಳಿತ ಮಂಡಳಿ ತಿಳಿಸಿದೆ.

Tags:    

Similar News