Health Alert | ಕೇರಳದಿಂದ ಬರುವ ಈ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇರಳದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಪತ್ರ ಬರೆದಿರುವುದಾಗಿ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.;
ಆರೋಗ್ಯಕ್ಕೆ ಹಾನಿಕರವಾದ ಗೋಬಿ, ಕಬಾಬ್, ಕಾಟನ್ ಕ್ಯಾಂಡಿಗಳಲ್ಲಿ ಬಳಸುವ ಕೃತಕ ಬಣ್ಣವನ್ನು ರಾಜ್ಯದಲ್ಲಿ ಈಗಾಗಲೇ ಆಹಾರ ಇಲಾಖೆ ನಿಷೇಧಿಸಿದ್ದು, ಇದೀಗ ಹೊರರಾಜ್ಯ ಕೇರಳದಲ್ಲಿ ತಯಾರಿಸಿ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ಸಿಹಿ ತಿಂಡಿಗಳ 90 ಮಾದರಿಗಳ ಪೈಕಿ 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.
ಈ ಪ್ರಕರಣಕ್ಕೆ ಸಂಬಧಿಸಿದಂತೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇರಳದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಪತ್ರ ಬರೆದಿರುವುದಾಗಿ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 90 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿತ್ತು. ಅವುಗಳಲ್ಲಿ 31 ಮಾದರಿಗಳಲ್ಲಿ ಅಲ್ಯುರಾ ರೆಡ್, ಕಾರಮೊಸೈನ್, ಸನ್ಸೆಟ್ ಎಲ್ಲೋ, ಟಾರ್ಟ್ರಾಜೈನ್ ಬಣ್ಣಗಳ ಬಳಕೆ ಖಚಿತವಾಗಿದೆ. ಜತೆಗೆ ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ ತಯಾರಿಕಾ ದಿನಾಂಕ, ತಯಾರಿಕೆ ಮಾಡುವವರ ವಿವರಗಳು ಇಲ್ಲದೆ ಇರುವುದು. ತಯಾರಿಕಾ ದಿನಾಂಕವನ್ನು ಮುಂಚಿತವಾಗಿ ನಮೂದು ಮಾಡಿರುವುದು, FSSAI ನೋಂದಣಿ/ಪರವಾನಗಿ ಸಂಖ್ಯೆ ಮುದ್ರಿತವಾಗಿಲ್ಲದಿರುವುದು ಸಹ ಕಂಡುಬಂದಿರುತ್ತದೆ ಎಂದು ಅವರು ಹೇಳಿದ್ದಾರೆ.