ಕಾಂಗ್ರೆಸ್ ರಾಜ್ಯ ಸಮಾವೇಶ: ಬಿಜೆಪಿ ಕಾರ್ಯಕರ್ತರಿಂದ ಸಿಎಂಗೆ ಘೇರಾವ್ ಹಾಕಲು ಯತ್ನ

ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ವತಿಯಿಂದ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ;

Update: 2024-02-17 11:51 GMT

ಮಂಗಳೂರು: ಕಾಂಗ್ರೆಸ್‌ ವತಿಯಿಂದ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆರಂಭವಾಗಿದೆ. ಈ ವೇಳೆ ಮುಖ್ಯಮಂತ್ರಿಗೆ ಘೇರಾವ್ ಹಾಕಲು ಯತ್ನ ಮಂಗಳೂರು ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯಕರತರು ಯತ್ನಿಸಿದ್ದಾರೆ.

ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ, ಶಾಸಕ ಭರತ್ ಶೆಟ್ಟಿ ಹಾಗೂ ವೇದವ್ಯಾಸ್ ಕಾಮತ್ ಮೇಲೆ ವಿನಾಕಾರಣ ಎಫ್ಐಆರ್ ದಾಖಲಿಸಿರುವುದನ್ನು ವಿರೋಧಿಸಿ ವಿಮಾನ ನಿಲ್ದಾಣ ರಸ್ತೆಯ ಬೋಂದೆಲ್ ಬಳಿ ಮಂಗಳೂರು ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯಕರತರು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದಾರೆ.

ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗೆ ಘೇರಾವ್ ಹಾಕಲು ಯತ್ನ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದರಿಂದ ಬಿಜೆಪಿ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರತರು ಬಿತ್ತಿ ಪತ್ರ ಹಿಡಿದು ಸಿಎಂ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ.

Tags:    

Similar News