ಪ್ರಶಸ್ತಿ ಅವಾಂತರ | ಬಿ.ಜಿ. ರಾಮಕೃಷ್ಣಗೆ ನೀಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ 'ಅತ್ಯುತ್ತಮ ಶಿಕ್ಷಕ' ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ.

Update: 2024-09-05 05:57 GMT
ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ 'ಉತ್ತಮ ಶಿಕ್ಷಕ' ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ.
Click the Play button to listen to article

ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ 'ಅತ್ಯುತ್ತಮ ಶಿಕ್ಷಕ' ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ. 

ರಾಮಕೃಷ್ಣ ಸೇರಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು (ಮತ್ತೊಬ್ಬರು ಮೈಸೂರು ಜಿಲ್ಲೆ ಹುಣಸೂರಿನ ಎ. ರಾಮೇಗೌಡ) ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಾಲಾ ಶಿಕ್ಷಣ ಇಲಾಖೆ, ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಿತ್ತು.

ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ, ಕಾಲೇಜು ಗೇಟಿನ ಹೊರಗೆ ನಿಲ್ಲಿಸುವ ಮೂಲಕ ಹಿಜಾಬ್‌ ವಿರುದ್ಧ ವಿವಾದ ಸೃಷ್ಟಿಸಿದ್ದ ಕೋಮುವಾದಿ ಶಕ್ತಿಗಳ ಪರ ನಿಂತಿದ್ದರು. 

ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ವಿವಾದ ಶುರುವಾಗಿದ್ದ ಪ್ರಾಂಶುಪಾಲ ರಾಮಕೃಷ್ಣ ಅವರ ಧೋರಣೆಯಿಂದ ಎಂಬ ಗಂಭೀರ ಆರೋಪ ಹೊತ್ತಿರುವ ಅವರಿಗೆ ಪ್ರಶಸ್ತಿ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದಕ್ಕೆ ಈಡಾಗಿತ್ತು. 

ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ 20 ಪ್ರಾಥಮಿಕ ಶಾಲಾ ಶಿಕ್ಷಕರು, 11 ಪ್ರೌಢಶಾಲಾ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರು ಹಾಗೂ ಇಬ್ಬರು ಪ್ರಾಂಶುಪಾಲರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಿತ್ತು. 

Tags:    

Similar News