ಬಗರ್‌ಹುಕುಂ ಮಂಜೂರಾತಿ | ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ

ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ.

Update: 2024-10-05 11:44 GMT
ಸಚಿವ ಕೃಷ್ಣಭೈರೇಗೌಡ
Click the Play button to listen to article

ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. 

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

Tags:    

Similar News